ಬೆಂಗಳೂರು: ಅಂತಾರಾಷ್ಟ್ರೀಯ ಪ್ರಯಾಣ ಮಾಡುವಾಗ ಎಲ್ಲರ ಪಾಸ್ ಪೋರ್ಟ್, ವೀಸಾ ಚೆಕ್ ಆಗುತ್ತದೆ. ಕೇಂದ್ರ ಸರ್ಕಾರಕ್ಕೆ ತಿಳಿಯದಂತೆ ಯಾರೂ ದೇಶದ ಹೊರಗೆ ಹೋಗಲು ಸಾಧ್ಯವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
- ಪ್ರೊ. ಎಸ್. ಬಿಳಿಗಿರಿ ವಾಸನ್ ಅವರಿಗೆ ಅಭಿನಂದನಾ ಸಮಾರಂಭ
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
ಪ್ರಜ್ವಲ್ ರೇವಣ್ಣ ದುಬೈ ಬಿಟ್ಟು ಇನ್ನು ಯಾವುದೇ ದೇಶದಲ್ಲಿದ್ದರೂ ಕರೆತರುತ್ತೇವೆ. ಅವರು ದೇಶಕ್ಕೆ ಬರಲೇಬೇಕು. ಅವರ ರಾಜತಾಂತ್ರಿಕ ಪಾಸ್ ಪೋರ್ಟ್ ನ್ನು ರದ್ದು ಮಾಡಲು ಪ್ರಧಾನಿಗಳಿಗೆ ಪತ್ರ ಬರೆದಿದ್ದೇನೆ ಎಂದು ಹೇಳಿದ್ದಾರೆ.
ಪ್ರಜ್ವಲ್ ರೇವಣ್ಣ ಅವರ ಬಗ್ಗೆ ತಿಳಿದೂ Bharatiya Janata Party (BJP) ಪಕ್ಷ ಜೆಡಿಎಸ್ ನೊಂದಿಗೆ ಮೈತ್ರಿ ಮಾಡಿಕೊಂಡಿದೆ. ಪ್ರಜ್ವಲ್ ರೇವಣ್ಣ ಅವರ ಪ್ರಕರಣದಲ್ಲಿ ಸಂತ್ರಸ್ತ ಮಹಿಳೆಗೆ ರಕ್ಷಣೆ ನೀಡಲು ಸೂಚಿಸಿದ್ದೇನೆ. ವಿಪರ್ಯಾಸವೆಂದರೆ ಕೇಂದ್ರ ಸರ್ಕಾರ ಆರೋಪಿಯ ರಕ್ಷಣೆಗೆ ನಿಂತಿದೆ ಎಂದಿದ್ದಾರೆ.
ತಮಗೂ ರೇವಣ್ಣನ ಕುಟುಂಬಕ್ಕೂ ಸಂಬಂಧವಿಲ್ಲ ಎನ್ನುತ್ತಿದ್ದ ಕುಮಾರಸ್ವಾಮಿ ಹಾಗೂ ದೇವೇಗೌಡರು ತಮ್ಮ ಮನೆಗೆ ವಕೀಲರನ್ನು ಕರೆಸಿ ಚರ್ಚೆ ಮಾಡಿದ್ದಾರೆ. ಚುನಾವಣಾ ಪ್ರಚಾರಕ್ಕಾಗಿ ಹೋದಾಗ ನಾನು ಬೇರೆಯಲ್ಲ, ಪ್ರಜ್ವಲ್ ರೇವಣ್ಣ ಬೇರೆಯಲ್ಲ ಎಂದಿದ್ದರು. ರಾಜಕೀಯ ಹಾಗೂ ಪಾಪ ಕೃತ್ಯಗಳನ್ನು ಅವರೆಲ್ಲರೂ ಒಟ್ಟಿಗೆ ಮಾಡುತ್ತಾರೆ ಎಂದಿದ್ದಾರೆ.
ಹುಬ್ಬಳ್ಳಿಯಲ್ಲಿ ನಡೆದ ನೇಹಾ ಕೊಲೆಯನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜಕೀಯ ಲಾಭಕ್ಕಾಗಿ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಕೊಲೆ ನಡೆದ ದಿನವೇ ಆರೋಪಿಯನ್ನು ಬಂಧಿಸಲಾಗಿದೆ. ಪ್ರಕರಣವನ್ನು ಸಿಐಡಿ ಗೆ ವಹಿಸಿ ವಿಶೇಷ ನ್ಯಾಯಾಲಯವನ್ನು ಸ್ಥಾಪಿಸಲಾಗಿದೆ. ಕಾನೂನಿನ ಪ್ರಕಾರ ಕಠಿಣ ಶಿಕ್ಷೆಗೆ ಗುರಿಯಾಗಿಸಲು ಪ್ರಯತ್ನಿಸಲಾಗಿದೆ. ನೊಂದ ಕುಟುಂಬಕ್ಕೆ ನ್ಯಾಯ ಕೊಡಿಸಲು ಒಂದು ಸರ್ಕಾರವಾಗಿ ನಾವು ನಮ್ಮ ಕರ್ತವ್ಯವನ್ನು ಪ್ರಾಮಾಣಿಕವಾಗಿ ನಿರ್ವಹಿಸುತ್ತಿದ್ದೇವೆ ಎಂದು ಹೇಳಿದ್ದಾರೆ.
ಸುಳ್ಳು ಸುಳ್ಳೇ ಲವ್ ಜಿಹಾದ್ ಎನ್ನುವ ಅಮಿತ್ ಶಾ ಮಣಿಪುರದಲ್ಲಿ ಏನು ಕ್ರಮ ಕೈಗೊಂಡಿದ್ದಾರೆ? ಎಂದು ಪ್ರಶ್ನಿಸಿದ್ದಾರೆ.




