ಬೆಂಗಳೂರು: ಕಳೆದ ಮಾರ್ಚ್-ಏಪ್ರಿಲ್ ತಿಂಗಳಿನಲ್ಲಿ ನಡೆದಿದ್ದ ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ-1ರ ಪರೀಕ್ಷಾ ಫಲಿತಾಂಶ ಇಂದು ಪ್ರಕಟವಾಗಲಿದೆ.
- ವರ್ಷದ ಬಳಿಕ ಸೆರೆಮನೆಯಿಂದ ಹೊರಬಂದ ನಟಿ ರನ್ಯಾ ರಾವ್!
- ಪ್ರೊ. ಎಸ್. ಬಿಳಿಗಿರಿ ವಾಸನ್ ಅವರಿಗೆ ಅಭಿನಂದನಾ ಸಮಾರಂಭ
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ವೌಲ್ಯ ನಿರ್ಣಯ ಮಂಡಳಿಯು ಬೆಳಗ್ಗೆ 10.30ಕ್ಕೆ ಫಲಿತಾಂಶವನ್ನು ಪ್ರಕಟಿಸಲಿದ್ದು, ರಾಜ್ಯದ ಎಲ್ಲ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಲ್ಲಿ ಫಲಿತಾಂಶ ಪ್ರಕಟವಾಗಲಿದೆ.
ಬೆಳಗ್ಗೆ 10 ಗಂಟೆಯ ನಂತರ ವಿದ್ಯಾರ್ಥಿಗಳು ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ಅಧಿಕೃತ ವೆಬ್ಸೈಟ್ KSEAB ಅಧಿಕೃತ ವೆಬ್ ಸೈ ಟ್ ಗಳಾದ kseab.karnataka.gov.in ಮತ್ತು Karresults.nic.in ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ.
ಅಧಿ ಕೃತ ವೆಬ್ಸೈಟ್ ಹೊರತುಪಡಿಸಿ ಖಾಸಗಿ ವೆಬ್ಸೈಟ್ನಲ್ಲಿ ಪ್ರಕಟವಾಗುವ ಫಲಿತಾಂಶವನ್ನು ವಿದ್ಯಾರ್ಥಿಗಳು ಇಲ್ಲವೇ ಪೋಷಕರು ಖಾತ್ರಿ ಮಾಡಿಕೊಳ್ಳಬಾರದು. ತಪ್ಪು ಮಾಹಿತಿ ನೀಡಿದರೆ ಅಂತಹ ವೆಬ್ಸೈಟ್ಗಳ ವಿರುದ್ಧ ಕಾನೂನು ಕ್ರಮ ಜರುಗಿಸುವುದಾಗಿ ಇಲಾಖೆ ಎಚ್ಚರಿಕೆ ಕೊಟ್ಟಿದೆ.
ಕಳೆದ ಮಾರ್ಚ್ 25ರಿಂದ ಏಪ್ರಿಲ್ 6ರವರೆಗೆ ರಾಜ್ಯದ 2,750 ಕೇಂದ್ರಗಳಲ್ಲಿ ನಡೆದ ಪರೀಕ್ಷೆಯಲ್ಲಿ 4,41,910 ಬಾಲಕರು, 4,28,058 ಬಾಲಕಿಯರು, 18,225 ಖಾಸಗಿ ವಿದ್ಯಾರ್ಥಿಗಳು, 41,375 ಪುನರಾವರ್ತಿತ ವಿದ್ಯಾರ್ಥಿಗಳು, 5,424 ವಿಭಿನ್ನ ಸಾಮರ್ಥ್ಯವುಳ್ಳ ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 8,69,968 ವಿದ್ಯಾರ್ಥಿಗಳು ಹಾಜರಾಗಿದ್ದರು.



