ಬೆಂಗಳೂರು: ಲೋಕದ ಡೋಂಕ ನೀವೇಕೆ ತಿದ್ದುವಿರಿ, ನಿಮ್ಮ ನಿಮ್ಮ ತನುವ, ನಿಮ್ಮ ನಿಮ್ಮ ಮನವ ಸಂತೈಸಿಕೊಳ್ಳಿ. ಇದು ಹಾಸನದ ಪೆನ್ ಡ್ರೈವ್ ಪ್ರಕರಣ ಕುರಿತು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಮಾಡಿರುವ ಆರೋಪಗಳಿಗೆ ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ನೀಡಿರುವ ತಿರುಗೇಟು.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಬಸವ ಜಯಂತಿ ಅಂಗವಾಗಿ ವಿಧಾನಸೌಧ ಆವರಣದಲ್ಲಿರುವ ಬಸವೇಶ್ವರರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೆನ್ಡ್ರೈವ್ ಪ್ರಕರಣಕ್ಕೆ ಪ್ರತಿಕ್ರಿಯಿಸಲು ನಿರಾಕರಿಸಿದರು. ಆದರೆ ಕುಮಾರಸ್ವಾಮಿ ಅವರ ಆರೋಪ ಕುರಿತಂತೆ ಮೊದಲು ನಿಮ್ಮ ಮನೆಯನ್ನು ಸರಿ ಪಡಿಸಿಕೊಳ್ಳಿ ಎಂದರು.
ಇಂದು ಬಸವಣ್ಣನವರ ಕೆಲಸ. ಇಲ್ಲಿ ಬೇರೆ ವಿಚಾರಗಳ ಚರ್ಚೆ ಸೂಕ್ತವಲ್ಲ. ಬಸವಣ್ಣ ಏನು ಹೇಳಿದ್ದಾರೆ. ಲೋಕದ ಡೋಂಕ ನೀವೇಕೆ ತಿದ್ದುವಿರಿ, ನಿಮ್ಮ ನಿಮ್ಮ ತನುವ, ನಿಮ್ಮ ನಿಮ್ಮ ಮನವ ಸಂತೈಸಿಕೊಳ್ಳಿ ಎಂದಿದ್ದಾರೆ. ಬೇರೆಯವರ ಮೇಲೆ ಏಕೆ ಜವಾಬ್ದಾರಿ ಹೊರಿಸುತ್ತೀರಿ. ಇದೇ ಅಂತರಂಗ ಶುದ್ಧಿ, ಇದೇ ಬಹಿರಂಗ ಶುದ್ಧಿ. ಮೊದಲು ನಿಮ್ಮ ಮನೆ ರಿಪೇರಿ ಮಾಡಿಕೊಳ್ಳಿ ಎಂದರು.
ಬೇರೆಯವರ ಬಗ್ಗೆ ಏಕೆ ಮಾತನಾಡುತ್ತಿರಿ? ಲೋಕದ ಡೋಂಕನ್ನು ತಿದ್ದಿಕೊಳ್ಳಿ ಎಂದು ಬಸವಣ್ಣ ಹೇಳಿದ್ದಾರೆ. ನಾವು ಅದನ್ನು ಪಾಲಿಸೋಣ. ಮಿಕ್ಕ ವಿಚಾರವನ್ನು ನಂತರ ಮಾತನಾಡೋಣ. ರಾಜ್ಯಪಾಲರಿಗೆ ದೂರು ನೀಡಿರುವ ಕುಮಾರಸ್ವಾಮಿಯವರಿಗೆ ಶುಭವಾಗಲಿ ಎಂದು ಹಾರೈಸುವುದಾಗಿ ಹೇಳಿದರು.




