ಬೆಂಗಳೂರು: ವಿಧಾನ ಪರಿಷತ್ತಿನ ಶಿಕ್ಷಕರ ಹಾಗೂ ಪದವೀಧರರ ಕ್ಷೇತ್ರಗಳಿಗೆ ಜೂನ್ 3ರಂದು ನಡೆಯಲಿರುವ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳುವ ಕುರಿತಂತೆ ನಿರ್ಧಾರ ಕೈಗೊಳ್ಳಲು ಹೈಕಮಾಂಡ್ ಗೆ ಬಿಡಲು ರಾಜ್ಯ ಬಿಜೆಪಿ ತೀರ್ಮಾನಿಸಿದೆ.
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್
- ನಮ್ಮ ಪ್ರತಿಭೆಗಳು ದೆಹಲಿಯಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿರುವುದು ಸಂತಸದ ವಿಷಯ: ಕೆ.ಸುಧಾಕರ್
ಲೋಕಸಭೆ ಚುನಾವಣೆಯ ಅವಲೋಕನ ಹಾಗೂ ವಿಧಾನಪರಿಷತ್ ಚುನಾವಣೆಯ ಕಾರ್ಯತಂತ್ರ ಕುರಿತು ಚರ್ಚಿಸಲು ಕರೆಯಲಾಗಿದ್ದ ಉನ್ನತ ಮಠದ ಸಭೆಯಲ್ಲಿ ವಿಧಾನ ಪರಿಷತ್ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಮೈತ್ರಿ ಕುರಿತಂತೆ ಸುದೀರ್ಘ ಚರ್ಚೆ ನಡೆಯಿತು.
ಸಂಸದ ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ಕಿರುಕುಳ ಆರೋಪದ ಪೆನ್ ಡ್ರೈವ್ ಬಹಿರಂಗ ಪ್ರಕರಣ ಬಿಜೆಪಿ ಮೇಲೆ ಸಾಕಷ್ಟು ಪರಿಣಾಮ ಬೀರಿದೆ. ಹೀಗಾಗಿ ಇವರ ಜೊತೆ ಮೈತ್ರಿ ಮುಂದುವರಿಸಿದರೆ ಪಕ್ಷಕ್ಕೆ ದೊಡ್ಡ ಹಿನ್ನಡೆ ಆಗಲಿದೆ ಎಂದು ಕೆಲವರು ಅಭಿಪ್ರಾಯ ವ್ಯಕ್ತಪಡಿಸಿದರೆ, ಮತ್ತೆ ಕೆಲವರು ಹಳೆ ಮೈಸೂರು ಪ್ರದೇಶದಲ್ಲಿ ಜೆಡಿಎಸ್ ಹೆಚ್ಚು ಪ್ರಾಬಲ್ಯ ಹೊಂದಿದ್ದು, ಇದೊಂದೇ ಚುನಾವಣೆಯಲ್ಲಿ ಮಾತ್ರವಲ್ಲದೆ ಮುಂದಿನ ಹಲವು ಚುನಾವಣೆಗಳಲ್ಲಿ ಬಿಜೆಪಿಗೆ ಅನುಕೂಲವಾಗಲಿದೆ ಎಂಬ ವಾದ ಮಂಡಿಸಿದರು.
ಈ ಕುರಿತಂತೆ ಪರ ವಿರೋಧದ ಚರ್ಚೆಯ ನಡುವೆ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಅವರು ಜೆಡಿಎಸ್ ಗೆದ್ದಿರುವ ಎರಡು ಕ್ಷೇತ್ರಗಳನ್ನು ಅವರಿಗೆ ಬಿಟ್ಟುಕೊಟ್ಟು ಉಳಿದ ನಾಲ್ಕು ಕ್ಷೇತ್ರಗಳಲ್ಲಿ ಬಿಜೆಪಿ ಸ್ಪರ್ಧಿಸುವುದು ಸೂಕ್ತ ಎಂದು ಹೇಳಿದ್ದು, ಅಂತಿಮವಾಗಿ ಈ ಕುರಿತು ಹೈಕಮಾಂಡ್ ನಿರ್ಧಾರಕ್ಕೆ ಬಿಡಲು ತೀರ್ಮಾನಿಸಲಾಯಿತು ಎಂದು ಮೂಲಗಳು ತಿಳಿಸಿವೆ.
ಈ ನಡುವೆ ಮೈಸೂರಿನಲ್ಲಿ ಪ್ರತಿಕ್ರಿಯೆ ನೀಡಿದ ಯಡಿಯೂರಪ್ಪ, ಸಂಸದ ಪ್ರಜ್ವಲ್ ರೇವಣ್ಣ ಪೆನ್ಡ್ರೈವ್ ಪ್ರಕರಣದ ತನಿಖೆ ಪಾರದರ್ಶಕವಾಗಿ ನಡೆಯಬೇಕಾದರೆ ಸಿಬಿಐಗೆ ಕೊಡಬೇಕು. ಬಹುತೇಕರ ಅಭಿಪ್ರಾಯ ಇದೇ ಆಗಿದೆ ಎಂದರು.




