ಕೇಂದ್ರ ನೌಕರರಿಗೆ ಸಿಹಿ ಸುದ್ದಿ

5 years ago

ದೆಹಲಿ: ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಕೇಂದ್ರ ಸರ್ಕಾರ ಡಿಯರ್ನೆಸ್ ಭತ್ಯೆಯನ್ನು ಹೆಚ್ಚಿಸಲು ನಿರ್ಧರಿಸಿದೆ. ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ, ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಶೇ.3ರಷ್ಟು ಭತ್ಯೆ ಹೆಚ್ಚಿಸಲು ನಿರ್ಧರಿಸಲಾಗಿದೆ.

ಕೇಂದ್ರ ಸರ್ಕಾರದ 1 ಕೋಟಿಗೂ ಹೆಚ್ಚು ಉದ್ಯೋಗಿಗಳು ಮತ್ತು ಪಿಂಚಣಿದಾರರು ಇದರ ಲಾಭ ಪಡೆಯಲಿದ್ದಾರೆ. ಜುಲೈನಲ್ಲಿ, ಸರ್ಕಾರ ಡಿಎಯನ್ನು ಶೇ.11 ರಿಂದ 28ಕ್ಕೆ ಹೆಚ್ಚಿಸಿದೆ. ಈ ಹಿಂದೆ ಡಿಎಯನ್ನು ಶೇ.17ರ ದರದಲ್ಲಿ ನಿಗದಿಮಾಡಲಾಗಿತ್ತು.

Leave a Reply