ಬೆಂಗಳೂರು: ಸರ್ಕಾರಿ ಶಾಲೆಗಳ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಹೆಚ್ಚಳಕ್ಕೆ ಅಗತ್ಯ ಕ್ರಮ ಕೈಗೊಂಡಿರುವ ಶಿಕ್ಷಣ ಇಲಾಖೆ ಮೊದಲ ಪರೀಕ್ಷೆಯಲ್ಲಿ ವಿಫಲರಾದ ವಿದ್ಯಾರ್ಥಿಗಳಿಗೆ ಎಸ್ಎಸ್ಎಲ್ಸಿ ಪರೀಕ್ಷೆ-2 ಅನ್ನು ನಡೆಸುತ್ತಿದೆ.
- ಹೈಕಮಾಂಡ್ಗೆ ಕೊಡಲು ಹಣವಿದೆ, ರೈತರಿಗೆ ಕೊಡಲು ಹಣವಿಲ್ಲ: ಆರ್.ಅಶೋಕ
- ಯಶವಂತರಾಯಗೌಡ ಪಾಟೀಲ್ ರಾಜೀನಾಮೆ ಕುರಿತು ಡಿ ಕೆ ಶಿವಕುಮಾರ್ ಹೇಳಿದ್ದೇನು?
- ಬರ ಘೋಷಣೆಗಿರುವ ನಿಯಮಗಳನ್ನು ಕೇಂದ್ರ ಸರ್ಕಾರ ಸಡಿಲಿಸಲಿ: ಡಾ. ಜಿ. ಪರಮೇಶ್ವರ್
- ಧನುಷ್ ನಟನೆಯ ‘OM’ ಬಿಡುಗಡೆ ದಿನಾಂಕ ಮುಂದೂಡಿಕೆ!
- ಈ ದೇಶ ಕಟ್ಟಿದ್ದೇ ದಲಿತರು, ನೀಲಿ ಶಾಲು ಬಗ್ಗೆ ಮಾತಾಡೋಕೆ ನೀನ್ಯಾವನೋ?
ಈ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಶಾಲೆಗಳಲ್ಲಿ ವಿಶೇಷ ಬೋಧನಾ ಪರಿಹಾರ ತರಗತಿಗಳನ್ನು ನಡೆಸುತ್ತಿದೆ. ಇದಕ್ಕಾಗಿ ಶಿಕ್ಷಕರು ಬೇಸಿಗೆ ರಜೆಯ ಕೆಲವು ದಿನಗಳನ್ನು ತ್ಯಾಗ ಮಾಡಿ ಶಾಲೆಗಳಿಗೆ ಆಗಮಿಸಬೇಕು. ಇದೀಗ ಇಂತಹ ಶಿಕ್ಷಕರ ನೆರವಿಗೆ ಧಾವಿಸಿರುವ ಇಲಾಖೆ ಇಂತಹ ಶಿಕ್ಷಕರುಗಳಿಗೆ ಗಳಿಕೆ ರಜೆಯನ್ನು ಪಡೆಯಲು ಸರ್ಕಾರ ಅವಕಾಶ ಮಾಡಿಕೊಟ್ಟಿದೆ.
ಸರ್ಕಾರದ ಶೈಕ್ಷಣಿಕ ವೇಳಾಪಟ್ಟಿ ಪ್ರಕಾರ, ಮೇ 29ರ ತನಕ ಶಾಲೆಗಳಿಗೆ ಬೇಸಿಗೆ ರಜೆ ಇದೆ. ಆದರೆ ಶಿಕ್ಷಕರು ಶಾಲೆಗಳಿಗೆ ಮೇ 15ರಿಂದಲೇ ಆಗಮಿಸುತ್ತಿದ್ದಾರೆ. ಎಸ್ಎಸ್ಎಲ್ಸಿ ಪರೀಕ್ಷೆ-2ಕ್ಕೆ ಆಯಾ ಪ್ರೌಢಶಾಲೆಗಳಲ್ಲಿ ವಿಶೇಷ ತರಗತಿ ನಡೆಸುವಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸೂಚನೆ ನೀಡಿದೆ. ಬೇಸಿಗೆ ರಜೆ ಕಡಿತ ಮಾಡಿರುವುದಕ್ಕೆ ಶಿಕ್ಷಕರು ಆಕೋಶ ವ್ಯಕ್ತಪಡಿಸಿದ್ದರು.
ಈ ಹಿನ್ನಲೆಯಲ್ಲಿ ಗಳಿಕೆ ರಜೆಯನ್ನು ನೀಡಿ ಸರ್ಕಾರ ಶಿಕ್ಷಕರ ಮನವೊಲಿಕೆ ಮಾಡಿದೆ. ಮೇ 15ರಿಂದಲೇ ಕೆಲವು ಶಾಲೆಗಳಲ್ಲಿ ವಿಶೇಷ ತರಗತಿಗಳನ್ನು ಆರಂಭಿಸಲಾಗಿದೆ. ಒಂದು ಶಾಲೆಯಲ್ಲಿ ಎಸ್ಎಸ್ಎಲ್ಸಿ ಅನುತ್ತೀರ್ಣಗೊಂಡ ಒಟ್ಟು ವಿದ್ಯಾರ್ಥಿಗಳ ಸಂಖ್ಯೆ 10ಕ್ಕಿಂತ ಕಡಿಮೆ ಇದ್ದರೆ ಸಮೀಪದ ಶಾಲೆಯಲ್ಲಿ ತರಗತಿ ನಡೆಸಬಹುದು.




