ಬೆಂಗಳೂರು: ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ನಡೆಸುವ ಹೊರಗುತ್ತಿಗೆ ನೌಕರರ ನೇಮಕಾತಿಯಲ್ಲಿ ಮೀಸಲಾತಿ ಜಾರಿ ಮಾಡಿ ಆದೇಶ ಹೊರಡಿಸಲಾಗಿದೆ. ಈ ಮೂಲಕ ಐತಿಹಾಸಿಕ ಹೆಜ್ಜೆಯಿರಿಸಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ಸಂಪತ್ತು, ಅಧಿಕಾರ, ಅವಕಾಶಗಳು ಸಮಾನವಾಗಿ ಹಂಚಿಕೆಯಾಗಬೇಕೆಂಬ ಸಮಸಮಾಜದ ಆಶಯವೇ ನಮ್ಮ ಸರ್ಕಾರದ ಆಶಯವಾಗಿದೆ ಎಂದು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಹೇಳಿದ್ದಾರೆ.
ಸರ್ಕಾರಿ ಇಲಾಖೆಗಳಲ್ಲಿ ವಿವಿಧ ಹಂತದ ಸಿಬ್ಬಂದಿ ನೇಮಕಾತಿಯನ್ನು ಹೊರಗುತ್ತಿಗೆ ಆಧಾರದಲ್ಲಿ ವಿವಿಧ ಏಜೆನ್ಸಿಗಳ ಮೂಲಕ ನೇಮಕ ಮಾಡಿಕೊಳ್ಳುತ್ತಿರುವ ಕಾರಣ ಮೀಸಲಾತಿ ಸಿಗುತ್ತಿಲ್ಲ. ಏಜೆನ್ಸಿಗಳು ತಮಗೆ ಬೇಕಾದವರಿಗೆ ಉದ್ಯೋಗ ನೀಡುತ್ತಿರುವುದರಿಂದ ಪರಿಶಿಷ್ಟ ಜಾತಿ, ಪಂಗಡ ಹಾಗೂ ಹಿಂದುಳಿದ ವರ್ಗಕ್ಕೆ ಸೇರಿದ ಸಮುದಾಯದವರು ಉದ್ಯೋಗದಿಂದ ವಂಚಿತರಾಗುತ್ತಿದ್ದಾರೆ. ಇಲ್ಲಿಯೂ ಕಡ್ಡಾಯ ಮೀಸಲಾತಿ ಜಾರಿ ಮಾಡಬೇಕು ಎಂಬ ಹಕ್ಕೊತ್ತಾಯ ಬಹಳಕಾಲದಿಂದ ಇತ್ತು. ಇದನ್ನು ನಮ್ಮ ಸರ್ಕಾರ ಈಡೇರಿಸಿದೆ ಎಂದಿದ್ದಾರೆ.




