ಬಳ್ಳಾರಿ: ಜಿಲ್ಲೆಯ ರೈತರು ಬಿತ್ತನೆ ಬೀಜಗಳನ್ನು ಅಧಿಕೃತ ಮಾರಾಟಗಾರರಿಂದ ಮಾತ್ರ ಖರೀದಿಸಬೇಕು ಮತ್ತು ಅಧಿಕೃತ ಬಿಲ್ಲು ಪಡೆದುಕೊಳ್ಳಬೇಕು. ಯಾವುದೇ ಕಾರಣಕ್ಕೂ ಯಾರಾದರೂ ನೇರವಾಗಿ ಬಂದು ಲೂಸ್ ಪ್ಯಾಕೇಟ್ಗಳಲ್ಲಿ ಬಿತ್ತನೆ ಬೀಜಗಳನ್ನು ಮಾರಾಟ ಮಾಡಿದ್ದಲ್ಲಿ ಅಂತಹ ಬಿತ್ತನೆ ಬೀಜಗಳನ್ನು ಖರೀದಿಸಬಾರದು ಎಂದು ಜಂಟಿ ಕೃಷಿ ನಿರ್ದೇಶಕ ಎಂ.ತಿರುಮಲೇಶ್ ತಿಳಿಸಿದ್ದಾರೆ.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಪ್ರಸ್ತಕ ಸಾಲಿನಲ್ಲಿ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿರುವುದರಿಂದ ಜಿಲ್ಲೆಯಲ್ಲಿ ಸರಿಯಾದ ಸಮಯಕ್ಕೆ ಬಿತ್ತನೆ ಕಾರ್ಯ ಪ್ರಾರಂಭವಾಗುವ ಅವಕಾಶವಿದೆ. ಹತ್ತಿ ಬೆಳೆಯುವ ರೈತರು ಹತ್ತಿ ಬಿತ್ತನೆ ಬೀಜಗಳನ್ನು ಅಧಿಕೃತ ಮಾರಾಟಗಾರರಿಂದ ಮಾತ್ರ ಅಧಿಕೃತ ಬಿಲ್ಲು ಪಡೆದು ಖರೀದಿಸಬೇಕು, ಯಾವುದೇ ಕಾರಣಕ್ಕೂ ಲೂಸ್ ಪ್ಯಾಕೇಟ್ಗಳಲ್ಲಿ ಬಿತ್ತನೆ ಬೀಜಗಳನ್ನು ಖರೀದಿಸಬಾರದು. ಅಂತಹ ಬೀಜ ಮಾರಾಟಗಾರರ ಕಂಡುಬಂದಲ್ಲಿ ಕೃಷಿ ಇಲಾಖೆಗೆ ಮಾಹಿತಿ ನೀಡಬೇಕು ಎಂದು ಪ್ರಕಟಣೆಯಲ್ಲಿ ಕೋರಿದ್ದಾರೆ.




