ದಾವಣಗೆರೆ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2024-25 ನೇ ಸಾಲಿಗೆ ಡಾ. ಎ.ಪಿ.ಜೆ ಅಬ್ದುಲ್ ಕಲಾಂ ಪದವಿ ಪೂರ್ವ ವಸತಿ ಕಾಲೇಜು, ಕೊಂಡಜ್ಜಿ ಗ್ರಾಮ ಇಲ್ಲಿ ಪ್ರಥಮ ಮತ್ತು ದ್ವಿತೀಯ ಪಿ.ಯು.ಸಿ ಪಿ.ಸಿ.ಎಂ.ಬಿ ವಿಷಯಗಳಿಗೆ ಆಂಗ್ಲ ಮಾಧ್ಯಮದಲ್ಲಿ ಬೋಧಿಸಲು ತಾತ್ಕಾಲಿಕವಾಗಿ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ಇಂಗ್ಲೀಷ್ ಉಪನ್ಯಾಸಕರ ಹುದ್ದೆ ಸಂಖ್ಯೆ-1, ಗಣಿತ ಸಂಖ್ಯೆ-1, ಭೌತಶಾಸ್ತ್ರ ಸಂಖ್ಯೆ-1, ರಸಾಯನ ಶಾಸ್ತ್ರ ಸಂಖ್ಯೆ-1 ಹುದ್ದೆಗೆ ಎಂ.ಎಸ್ಸಿ ಮತ್ತು ಬಿ.ಇಡಿ ವಿದ್ಯಾರ್ಹತೆಯನ್ನು ಹೊಂದಿರಬೇಕು. ಅರ್ಹ ಅಭ್ಯರ್ಥಿಗಳು ಜೂನ್ 5 ರೊಳಗಾಗಿ ವಸತಿ ಕಾಲೇಜಿನಲ್ಲಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಮೊ.ಸಂ:9008815296, 8970159714 ನ್ನು ಸಂಪರ್ಕಿಸಬಹುದೆಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿ ಮಲ್ಲಿಕಾರ್ಜುನ್ ಮಠದ್ ತಿಳಿಸಿದ್ದಾರೆ.




