ಧಾರವಾಡ: ಜಿಲ್ಲೆಯಲ್ಲಿ ರೈತರಿಗೆ ಅವಶ್ಯಕವಾದ ಎಲ್ಲ ಕೃಷಿ ಪರಿಕರಗಳ ದಾಸ್ತಾನು ಇದ್ದು, ಎಮ್.ಆರ್.ಪಿ ದರಕ್ಕಿಂತ ಹೆಚ್ಚಿನ ದರದಲ್ಲಿ ಮಾರಾಟ ಮಾಡದಂತೆ ತಾಲೂಕುವಾರು ಕೃಷಿ ಪರಿಕರ ಮಾರಾಟಗಾರರ ಸಭೆ ಜರುಗಿಸಿ, ಎಚ್ಚರಿಕೆ ನೀಡಲಾಗಿದೆ. ತಪ್ಪಿತಸ್ಥರ ವಿರುದ್ಧ ಲೈಸನ್ಸ್ ಅಮಾನತು, ರದ್ದತಿ ಸೇರಿದಂತೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಹೇಳಿದ್ದಾರೆ.
- ಸತತ 5 ದಿನ ಬ್ಯಾಂಕ್ಗಳಿಗೆ ಬೀಗ!: ಏನಿರುತ್ತದೆ, ಏನಿಲ್ಲ? ಕಂಪ್ಲೀಟ್ ಡೀಟೈಲ್ಸ್!
- 814 ಉಪನ್ಯಾಸಕರ ನೇಮಕಾತಿಯಲ್ಲಿ ಉರ್ದುಗೆ ಸ್ಥಾನ ಎಲ್ಲಿದೆ?
- ಸಾಲ ಮನ್ನಾ ಮಾಡಿ ರೈತರ ಹಿತ ಕಾಪಾಡಿದ್ದ ಡಾ.ಮನಮೋಹನ್ ಸಿಂಗ್
- ರಾಜ್ಯದ ಅಭಿವೃದ್ಧಿಗೆ ಆರ್.ಅಶೋಕ್ ಅಡ್ಡಗಾಲು: ಕೆಪಿಸಿಸಿ
- ಎನ್ಜಿಟಿಯಲ್ಲಿ ವಕೀಲರನ್ನು ನೇಮಿಸಿ ಹೋರಾಟ ಮಾಡಬೇಕು: ಆರ್.ಅಶೋಕ
ಈ ಕುರಿತು ಪತ್ರಿಕಾ ಪ್ರಕಟಣೆ ಮೂಲಕ ಹೇಳಿಕೆ ನೀಡಿರುವ ಅವರು, ಕೃತಕ ಅಭಾವ, ಹೆಚ್ಚಿನ ದರದಂತಹ ದೂರುಗಳಿದ್ದಲ್ಲಿ ರೈತರು, ಧಾರವಾಡ ಉಪ ಕೃಷಿ ನಿರ್ದೇಶಕರು (8277931271), ಧಾರವಾಡ ಸಹಾಯಕ ಕೃಷಿ ನಿರ್ದೇಶಕರು(8277931285), ಕಲಘಟಗಿ ಸಹಾಯಕ ಕೃಷಿ ನಿರ್ದೇಶಕರು(8277931291), ಹುಬ್ಬಳ್ಳಿಯ ಉಪ ಕೃಷಿ ನಿರ್ದೇಶಕರು(8277931272), ಹುಬ್ಬಳ್ಳಿ ಸಹಾಯಕ ಕೃಷಿ ನಿರ್ದೇಶಕರು(8277931288), ಕುಂದಗೋಳ ಸಹಾಯಕ ಕೃಷಿ ನಿರ್ದೇಶಕರು(8277931294), ನವಲಗುಂದ ಸಹಾಯಕ ಕೃಷಿ ನಿರ್ದೇಶಕರು(8277931295), ಕೃಷಿ ಜಾಗೃತ ಕೊಶದ ಸಹಾಯಕ ಕೃಷಿ ನಿರ್ದೇಶಕರುಗಳು (8277931376 ಮತ್ತು 8277931274) ಧಾರವಾಡ ಜಂಟಿ ಕೃಷಿ ನಿರ್ದೇಶಕರು (8277931270) ಮತ್ತು ಜಿಲ್ಲೆಯ ಎಲ್ಲ ರೈತ ಸಂಪರ್ಕ ಕೇಂದ್ರಗಳ ಕೃಷಿ ಅಧಿಕಾರಿಗಳಿಗೆ ಸಂಪರ್ಕಿಸಿ ಎಂದು ಮಾಹಿತಿ ಮತ್ತು ದೂರು ನೀಡಬಹುದು ಎಂದು ತಿಳಿಸಿದ್ದಾರೆ.




