ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವೆಡೆಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿರುವ ಕೇಂದ್ರ ಅಪರಾಧ ವಿಭಾಗ(ಸಿಸಿಬಿ)ದ ಪೊಲೀಸರು ಅಕ್ರಮವಾಗಿ ನೆಲೆಸಿರುವ ನೂರಕ್ಕೂ ಅಧಿಕ ಬಾಂಗ್ಲಾದೇಶಿ ವಲಸಿಗರನ್ನು ಬಂಧಿಸಿದ್ದಾರೆ.
- ಈ ದೇಶ ಕಟ್ಟಿದ್ದೇ ದಲಿತರು, ನೀಲಿ ಶಾಲು ಬಗ್ಗೆ ಮಾತಾಡೋಕೆ ನೀನ್ಯಾವನೋ?
- ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣವೇ ಪದಚ್ಯುತಗೊಳಿಸಿ: ಸಿದ್ದರಾಮಯ್ಯ
- ಸತತ 5 ದಿನ ಬ್ಯಾಂಕ್ಗಳಿಗೆ ಬೀಗ!: ಏನಿರುತ್ತದೆ, ಏನಿಲ್ಲ? ಕಂಪ್ಲೀಟ್ ಡೀಟೈಲ್ಸ್!
- 814 ಉಪನ್ಯಾಸಕರ ನೇಮಕಾತಿಯಲ್ಲಿ ಉರ್ದುಗೆ ಸ್ಥಾನ ಎಲ್ಲಿದೆ?
- ಸಾಲ ಮನ್ನಾ ಮಾಡಿ ರೈತರ ಹಿತ ಕಾಪಾಡಿದ್ದ ಡಾ.ಮನಮೋಹನ್ ಸಿಂಗ್
ಖಚಿತ ಮಾಹಿತಿ ಆಧಾರದ ಮೇಲೆ ಸಿಸಿಬಿ ಪೊಲೀಸರು ನೆಲೆಸಿದ್ದ ಮನೆಗಳ ಮೇಲೆ ದಾಳಿ ನಡೆಸಿದರು. ಬಾಂಗ್ಲಾ ಗಡಿಭಾಗದಲ್ಲಿ ನುಸುಳಿ ಅಕ್ರಮವಾಗಿ ಬೆಂಗಳೂರಿಗೆ ಬಂದಿರುವ ಪ್ರಜೆಗಳು ಇವರಾಗಿದ್ದು, ದೇಶದಲ್ಲಿ ನೆಲೆಸುವುದಕ್ಕೆ ಯಾವುದೇ ಸೂಕ್ತ ದಾಖಲೆ ಇವರ ಬಳಿ ಇಲ್ಲ.
ಗುಪ್ತಚರ ಮಾಹಿತಿ ಆಧರಿಸಿ ದಾಳಿ ಮಾಡಿರುವ ಸಿಸಿಬಿ ತಂಡ ಮಧ್ಯರಾತ್ರಿ 1 ಗಂಟೆಯಿಂದ ಮುಂಜಾನೆ 5ರವರೆಗೂ ದಾಳಿ ನಡೆಸಿ ನೂರಕ್ಕೂ ಹೆಚ್ಚ ಅಕ್ರಮ ನಿವಾಸಿಗಳನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದೆ. ದಾಳಿ ವೇಳೆ ಹಲವು ಮತದಾರರ ಗುರುತಿನ ಪತ್ರ ಮಾಡಿಸಿಕೊಂಡಿರುವುದು ಪತ್ತೆಯಾಗಿದೆ ಎಂದು ಸಿಸಿಬಿ ಜಂಟಿ ಆಯುಕ್ತ ಚಂದ್ರಗುಪ್ತ ತಿಳಿಸಿದ್ದಾರೆ.
ಅಕ್ರಮ ವಾಸಿಗಳನ್ನು, ಸೂಕ್ತ ದಾಖಲೆಗಳ ಪರಿಶೀಲನೆ ಮಾಡದೆ ಇವರಿಗೆ ಬಾಡಿಗೆ ಮನೆಗಳನ್ನು ಹಾಗೂ ಕೊಠಡಿಗಳನ್ನು ನೀಡಿದವರನ್ನು ಕೂಡ ಪ್ರಶ್ನಿಸಲಾಗುತ್ತಿದೆ. ಇವರಲ್ಲಿ ಹೆಚ್ಚಿನವರು ಫ್ಯಾಕ್ಟರಿ, ಕೂಲಿ, ಹೋಟೆಲ್ಗಳಲ್ಲಿ ಕೆಲಸ ಮಾಡುವವರಾಗಿದ್ದಾರೆ. ಹಲವರು ಕೆಲವು ವರ್ಷಗಳಿಂದಲೂ ಬೆಂಗಳೂರಿನಲ್ಲಿ ನೆಲೆಸಿದ್ದಾರೆ ಎಂದು ಗೊತ್ತಾಗಿದೆ.




