ದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಕೇಂದ್ರ ಸಚಿವ ಸಂಪುಟದೊಂದಿಗೆ ಬುಧವಾರ ರಾಜೀನಾಮೆ ನೀಡಿದ್ದಾರೆ. ಅವರು ತಮ್ಮ ರಾಜೀನಾಮೆಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಸಲ್ಲಿಸಿದರು. “ರಾಷ್ಟ್ರಪತಿಗಳು ರಾಜೀನಾಮೆಯನ್ನು ಅಂಗೀಕರಿಸಿದ್ದು, ಹೊಸ ಸರ್ಕಾರ ರಚನೆಯಾಗುವವರೆಗೂ ಅಧಿಕಾರದಲ್ಲಿ ಮುಂದುವರಿಯುವಂತೆ ಪ್ರಧಾನ ಮಂತ್ರಿ ಮತ್ತು ಕೇಂದ್ರ ಮಂತ್ರಿ ಮಂಡಳಿಗೆ ವಿನಂತಿಸಿದರು” ಎಂದು ರಾಷ್ಟ್ರಪತಿ ಭವನ ತಿಳಿಸಿದೆ.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ರಾಷ್ಟ್ರಪತಿಗಳು ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ ಮತ್ತು ಹೊಸ ಸರ್ಕಾರ ರಚನೆಯಾಗುವವರೆಗೆ ಅಧಿಕಾರದಲ್ಲಿ ಮುಂದುವರಿಯುವಂತೆ ಪ್ರಧಾನಿ ಮತ್ತು ಕೇಂದ್ರ ಸಚಿವರ ಮಂಡಳಿಗೆ ವಿನಂತಿಸಿದ್ದಾರೆ ಎಂದು ರಾಷ್ಟ್ರಪತಿ ಭವನ ತಿಳಿಸಿದೆ.
ಭಾರತೀಯ ಚುನಾವಣಾ ಆಯೋಗ ಮಂಗಳವಾರ ಲೋಕಸಭೆ ಚುನಾವಣೆ ಫಲಿತಾಂಶ 2024 ಪ್ರಕಟಿಸಿದೆ. 543 ಸ್ಥಾನಗಳ ಪೈಕಿ ಬಿಜೆಪಿ 240 ಸ್ಥಾನಗಳಲ್ಲಿ ಗೆಲುವು ಸಾಧಿಸಿದರೆ, ಕಾಂಗ್ರೆಸ್ 99 ಸ್ಥಾನಗಳಲ್ಲಿ ಗೆದ್ದಿದೆ. ಲೋಕಸಭೆಯು 543 ಸದಸ್ಯರನ್ನು ಹೊಂದಿದ್ದು, ಬಿಜೆಪಿಯ ಸೂರತ್ ಅಭ್ಯರ್ಥಿ ಮುಖೇಶ್ ದಲಾಲ್ ಅವಿರೋಧವಾಗಿ ಆಯ್ಕೆಯಾಗಿದ್ದರು. ಈ ಕಾರಣದಿಂದಾಗಿ 542 ಸ್ಥಾನಗಳಿಗೆ ಚುನಾವಣೆ ನಡೆದು ಮತ ಎಣಿಕೆ ನಡೆಸಲಾಯಿತು.
ಲೋಕಸಭೆಯಲ್ಲಿ ಬಹುಮತ ಪಡೆದಿರುವ ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್ಡಿಎ) ಬೆಂಬಲದೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸತತ ಮೂರನೇ ಅವಧಿಗೆ ಸರ್ಕಾರ ಮುನ್ನಡೆಸಲಿದ್ದಾರೆ. ಬಿಜೆಪಿ 272 ಬಹುಮತದ ಗಡಿಯನ್ನು ತಲುಪಲು ವಿಫಲವಾಗಿದ್ದರೂ ಸರ್ಕಾರ ರಚಿಸಲು ಎನ್ಡಿಎ ಮಿತ್ರಪಕ್ಷಗಳ ಮೇಲೆ ಅವಲಂಬಿತವಾಗಿದೆ.




