ಬೆಂಗಳೂರು: ನಕಲಿ ವೈದ್ಯಕೀಯ ವೃತ್ತಿಯನ್ನು ಬೇರುಸಮೇತ ಕಿತ್ತೊಗೆಯಲು ಆರೋಗ್ಯ ಇಲಾಖೆಯು ಆದೇಶವನ್ನು ಹೊರಡಿಸಿದ್ದು, ಇದರನ್ವಯ ಖಾಸಗಿ ಆಸ್ಪತ್ರೆಗಳು, ಕ್ಲಿನಿಕ್’ಗಳು ತಮ್ಮ KPME ನೋಂದಣಿ ಸಂಖ್ಯೆ, ಆಸ್ಪತ್ರೆಯ ಹೆಸರು ಮತ್ತು ಮಾಲೀಕರ ಹೆಸರನ್ನು ಕಟ್ಟಡದ ಮುಂಭಾಗದಲ್ಲಿ ಪ್ರದರ್ಶಿಸವುದು ಕಡ್ಡಾಯವಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
- ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ್ ಅವರಿಗೆ ಫೇಕುಗಳ ಕಾಟ!
- ಇತಿಹಾಸದಲ್ಲೇ ದಾಖಲೆ ಬರೆಯುವಂತೆ ಬಸ್ ಟಿಕೆಟ್ ದರ ಏರಿಕೆ: ಆರ್ ಅಶೋಕ್
- ನವೆಂಬರ್ 07 ರಿಂದ ಎರಡನೇ ಹಂತದ ‘ವಾರ್ಡ್ ಒನ್’ ಅಭಿಯಾನ
- ಆ್ಯಕ್ಸಿಡೆಂಟಲ್ ಸಿಎಂ ಬೊಮ್ಮಾಯಿ ಅವರೇ ಹಾವೇರಿ ಕ್ಷೇತ್ರದ ಬಗ್ಗೆ ಗಮನ ಕೊಡಿ: ಬಿ ಕೆ ಹರಿಪ್ರಸಾದ್
- 40 ದಾಟಿದ ಪುರುಷರ ಮನಸ್ಸನ್ನು ಅರ್ಥಮಾಡಿಕೊಳ್ಳುವುದು ಹೇಗೆ?
ಇಷ್ಟೇ ಅಲ್ಲದೆ, ಅಲೋಪತಿ ಆಸ್ಪತ್ರೆಗಳು ನೀಲಿ ಬಣ್ಣ ಮತ್ತು ಆಯುರ್ವೇದಿಕ್ ಆಸ್ಪತ್ರೆಗಳು ಹಸಿರು ಬಣ್ಣದ ಬೋರ್ಡ್ ಬಳಸುವ ಮೂಲಕ ಬಣ್ಣ ಸಂಹಿತೆಯನ್ನು ಕಡ್ಡಾಯವಾಗಿ ಅನುಸರಿಸಬೇಕು ಎಂದಿದ್ದಾರೆ.
ಖಾಸಗಿ ವೈದ್ಯಕೀಯ ಆಸ್ಪತ್ರೆಗಳು ಈ ನಿಯಮಗಳನ್ನು ಅನುಸರಿಸುವಲ್ಲಿ ವಿಫಲವಾದಲ್ಲಿ KPME ತಿದ್ದುಪಡಿ ಕಾಯಿದೆ 2017 ರ ಸೆಕ್ಷನ್ 19(5) ರ ಅನ್ವಯ ಕಠಿಣ ಕಾನೂನುಕ್ರಮ ಕೈಗೊಳ್ಳಲಾಗುವುದು. ಹೆಚ್ಚಿನ ವಿವರಗಳಿಗಾಗಿ ದಯವಿಟ್ಟು ಸುತ್ತೋಲೆಯನ್ನು ಪರಾಮರ್ಶಿಸಿ ಎಂದು ಆಸ್ಪತ್ರೆಗಳಿಗೆ ನಿರ್ದೇಶನ ನೀಡಿದ್ದಾರೆ.
ನಕಲಿ ಮತ್ತು ಅರ್ಹತೆ ಹೊಂದಿಲ್ಲದ ವೈದ್ಯರು ಸಮಾಜಕ್ಕೆ ಕಂಟಕರಾಗಿದ್ದು ರೋಗಿಗಳ ಆರೋಗ್ಯದ ವಿಚಾರದಲ್ಲಿ ಚೆಲ್ಲಾಟವಾಡುತ್ತಿದ್ದಾರೆ. ನಮ್ಮ ಸರ್ಕಾರವು ರೋಗಿಗಳ ಸುರಕ್ಷತೆಗೆ ಮತ್ತು ಉತ್ತಮ ಆರೋಗ್ಯ ಸೇವೆ ಒದಗಿಸಲು ಬದ್ಧವಾಗಿದೆ ಎಂದಿದ್ದಾರೆ.




