ಬೆಂಗಳೂರು: ಬಿಬಿಎಂಪಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯಲ್ಲಿ ಇಂದು ಮಧ್ಯಾಹ್ನದಿಂದ ಸುರಿದ ಧಾರಾಕಾರ ಮಳೆಯಿಂದಾಗಿ ಇಡೀ ಪ್ರದೇಶ ಸಂಪೂರ್ಣ ಜಲಾವೃತಗೊಂಡಿತು. ಇದರಿಂದ ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಯಿತು. ಕಿಲೋಮೀಟರ್ ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗಿ ಆಂಬುಲೆನ್ಸ್ ಗಳು ಕೂಡ ಪರದಾಡುವಂತಹ ಸ್ಥಿತಿ ನಿರ್ಮಾಣವಾಯಿತು.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಕೂಡಲೇ ಸ್ಥಳಕ್ಕೆ ಬಂದ ಮೈಕೋ ಲೇಔಟ್ ಸಂಚಾರ ಠಾಣೆ ASI ಗೋವಿಂದಪ್ಪ ಕೆ ಖುದ್ದಾಗಿ ಮೋರಿಯಲ್ಲಿ ತುಂಬಿದ್ದ ಕಸವನ್ನು ತೆಗೆಯಲು ಮುಂದಾದರು. ಕೈಗಳಿಂದ ಮೋರಿಯಲ್ಲಿ ತುಂಬಿದ ಕಸವನ್ನು ಎತ್ತಿ ನೀರು ಹೋಗಲು ದಾರಿ ಮಾಡಿದರು.
ಮೋರಿಯಲ್ಲಿ ಬಿದ್ದಿದ್ದ ಬ್ಯಾರಿಕೇಟರ್ ಎತ್ತಿ ರಸ್ತೆ ಮೇಲೆ ಇಟ್ಟು ಯಾವುದೇ ವಾಹನ ಸವಾರರು ಅಪಘಾತಕ್ಕೆ ಸಿಲುದಂತೆ ಸುರಕ್ಷತೆ ಕ್ರಮ ಕೈಗೊಂಡರು. ಈ ಮೂಲಕ ಸಾರ್ವಜನಿಕರ ಶ್ಲಾಘನೆಗೆ ಪಾತ್ರರಾದರು.




