ದಾವಣಗೆರೆ: ಶಾಲಾ ಶಿಕ್ಷಣ ಮತ್ತು ಸಮಗ್ರ ಶಿಕ್ಷಣ ಯೋಜನೆಯಡಿ ಪ್ರಸಕ್ತ ಸಾಲಿಗೆ ಫಿಜಿಯೋಥೆರಪಿಸ್ಟ್ ಸೇವೆಯನ್ನು ಕೆಲಸ ಮತ್ತು ಪಾವತಿ ಆಧಾರದ ಮೇಲೆ ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿ ವಿಶೇಷ ಅಗತ್ಯವುಳ್ಳ ಮಕ್ಕಳ ಸಮನ್ವಯ ಶಿಕ್ಷಣ ಮಧ್ಯವರ್ತನ ಕಾರ್ಯಚಟುವಟಿಕೆಗಳ ಕಾರ್ಯ ಅನುಷ್ಠಾನಕ್ಕಾಗಿ ತೀವ್ರ ನ್ಯೂನತೆ ಹೊಂದಿರುವ ವಿಶೇಷ ಚೇತನ ಮಕ್ಕಳಲ್ಲಿ ಗುರುತಿಸಲ್ಪಟ್ಟಿರುವ “ದೈಹಿಕ ನ್ಯೂನತೆ” ಮತ್ತು “ಬಹುನ್ಯೂನತೆ” ಹೊಂದಿರುವ ಮಕ್ಕಳಿಗೆ ಫಿಜಿಯೋಥೆರಪಿ ಮೂಲಕ ನ್ಯೂನತೆಯ ಪ್ರಮಾಣವನ್ನು ತಗ್ಗಿಸುವ ದೃಷ್ಟಿಯಿಂದ ಜಿಲ್ಲೆಯ 6 ತಾಲ್ಲೂಕುಗಳಲ್ಲಿ ಅಗತ್ಯತೆ ಇರುವ ಮಕ್ಕಳಿಗೆ ಫಿಜಿಯೋಥೆರಪಿ ಸೇವೆ ಒದಗಿಸಲು ಡಿ.ಪಿ.ಟಿ ಅಥವಾ ಬಿ.ಪಿ.ಟಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಜೂನ್ 20 ರೊಳಗೆ ಉಪನಿರ್ದೇಶಕರು (ಆಡಳಿತ), ಶಾಲಾ ಶಿಕ್ಷಣ ಇಲಾಖೆ, ಸಮಗ್ರ ಶಿಕ್ಷಣ ಕರ್ನಾಟಕ, ಕೆ.ಇ.ಬಿ ಸರ್ಕಲ್, ದಾವಣಗೆರೆ ಇಲ್ಲಿಗೆ ಸಲ್ಲಿಸಬೇಕೆಂದು ಶಾಲಾ ಶಿಕ್ಷಣ ಮತ್ತು ಸಾಕ್ಷರಾತಾ ಇಲಾಖೆಯ ಉಪನಿರ್ದೇಶಕ ಜಿ.ಕೊಟ್ರೇಶ್ ತಿಳಿಸಿದ್ದಾರೆ.




