ಶಿವಮೊಗ್ಗ: 2024-25ನೇ ಶೈಕ್ಷಣಿಕ ಸಾಲಿನಲ್ಲಿ ಮಾಜಿ ಸೈನಿಕರು, ಮಾಜಿ ಸೈನಿಕ ಅವಲಂಬಿತರ ಮಕ್ಕಳ ವೈದ್ಯಕೀಯ ಮತ್ತು ದಂತ ವೈದ್ಯಕೀಯ ವ್ಯಾಸಂಗಕ್ಕಾಗಿ ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಸೀಟು ಹಂಚಿಕೆಯ ಮೇರೆಗೆ, ಕೇಂದ್ರೀಯ ಸೈನಿಕ ಮಂಡಳಿಯಿಂದ ಡಿಫೆನ್ಸ್ ಕೋಟಾದಡಿಯಲ್ಲಿ ಆದ್ಯತೆ ಮೇರೆಗೆ ಸೀಟು ಹಂಚಿಕೆ ಲಭ್ಯವಿದ್ದು, ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆಯಲ್ಲಿ ಅರ್ಹತೆ ಪಡೆದಿರುವ ವಿದ್ಯಾರ್ಥಿಗಳು ಕೇಂದ್ರೀಯ ಸೈನಿಕ ಮಂಡಳಿ ಆನ್ಲೈನ್ ಅರ್ಜಿ ಆಹ್ವಾನಿಸಿದೆ.
- ಸಿಎನ್ಎನ್, ಎಂಎಸ್ಎನ್ಬಿಸಿ, ಪಾಲಿಟಿಕೋಗೆ ಶ್ವೇತಭವನ ಪ್ರವೇಶ ನಿಷೇಧಿಸಿದ ಟ್ರಂಪ್
- ಕೆರೆಗಳ ಪುನಶ್ಚೇತನಕ್ಕೆ ₹150 ಕೋಟಿ ವೆಚ್ಚದ ವಿಶ್ವಬ್ಯಾಂಕ್ ಯೋಜನೆ: ಈಶ್ವರ್ ಖಂಡ್ರೆ
- ದಶಕ ಮೀರಿದ ಕಾನೂನು ಹಾದಿ ಮತ್ತು ಉತ್ತರವಿಲ್ಲದ ಪ್ರಶ್ನೆಗಳು
- ಪರಿಸರವನ್ನೂ ಉಳಿಸಬೇಕು, ಮಲೆನಾಡಿನ ರೈತರ ಬದುಕನ್ನೂ ಉಳಿಸಬೇಕು: ಮಧು ಬಂಗಾರಪ್ಪ
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
ಆಸಕ್ತರು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಿಂದ ಪಡೆದ ದೃಢೀಕೃತ ಅರ್ಹತಾ ಪ್ರಮಾಣ ಪತ್ರದೊಂದಿಗೆ ಅರ್ಜಿಯನ್ನು ಜುಲೈ 09ರೊಳಗಾಗಿ ಸಲ್ಲಿಸಬಹುದಾಗಿದ್ದು, ವಿವರವಾದ ಮಾಹಿತಿಯನ್ನು ಕೇಂದ್ರೀಯ ಸೈನಿಕ ಮಂಡಳಿಯ ಜಾಲತಾಣ “ONLINE.KSB.GOV.IN” ದಲ್ಲಿ ಪಡೆಯಬಹುದಾಗಿದೆ ಎಂದು ಉಪ ನಿರ್ದೇಶಕರು, ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಇವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರ ಕಛೇರಿ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಇವರ ದೂರವಾಣಿ ಸಂಖ್ಯೆ 08182-220925 ಯನ್ನು ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದು.



