ಬಳ್ಳಾರಿ: ತಾಲ್ಲೂಕಿನ ಕೊಳಗಲ್ಲು ಗ್ರಾಮದ ಏಕಲವ್ಯ ಮಾದರಿ ವಸತಿ ಶಾಲೆಯ ಮಕ್ಕಳಿಗೆ ಕೃಷಿ ಇಲಾಖೆ ವತಿಯಿಂದ ಮಣ್ಣು ಆರೋಗ್ಯ ಹಾಗೂ ಪರೀಕ್ಷಾ ವಿಶ್ಲೇಷಣೆ ಕುರಿತು ತರಬೇತಿ ನೀಡಲಾಯಿತು.
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್
ಪ್ರಸ್ತಕ ಸಾಲಿನಲ್ಲಿ ಕೇಂದ್ರ ಪುರಸ್ಕೃತ ಯೋಜನೆ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಶಾಲಾ ಮಕ್ಕಳಿಗೆ ಮಣ್ಣು ಆರೋಗ್ಯ ಅಭಿಯಾನ ಕುರಿತು ಕಾರ್ಯಕ್ರಮ ಆಯೋಜಿಸಿದ್ದು, 6 ನೇ ತರಗತಿಯಿಂದ 12 ನೇ ತರಗತಿಯ ವರೆಗಿನ ಮಕ್ಕಳಿಗೆ ಮಣ್ಣು ಆರೋಗ್ಯದ ಕುರಿತು ತರಬೇತಿ ನೀಡಲಾಯಿತು.
ಸಹಾಯಕ ಕೃಷಿ ನಿರ್ದೇಶಕ (ವಿಷಯ ತಜ್ಞರು) ಮೊಹಮ್ಮದ್ ರಫೀವುಲ್ಲಾ ರಜ್ವಿ ಅವರು, ಮಣ್ಣು ಆರೋಗ್ಯದ ಬಗ್ಗೆ ಮಾತನಾಡಿ, ಬೆಳೆಗೆ ಬೇಕಾಗಿರುವ 17 ಪೋಷಕಾಂಶಗಳ ಮಹತ್ವದ ಕುರಿತು ಮಕ್ಕಳಲ್ಲಿ ಅರಿವು ಮೂಡಿಸಿದರು. ಮಣ್ಣಿನ ಗುಣಧರ್ಮದ ಆಧಾರದ ಮೇರೆಗೆ ರಸಗೊಬ್ಬರಗಳನ್ನು ಬಳಸಬೇಕು ಎಂದರು.
ಹಗರಿಯ ಕೃಷಿ ವಿಜ್ಞಾನ ಕೇಂದ್ರದ ಮಣ್ಣು ವಿಜ್ಞಾನಿಗಳಾದ ಡಾ.ಎಸ್.ರವಿ ಅವರು ಮಣ್ಣು ಪರೀಕ್ಷಾ ವಿಧಾನ ಮತ್ತು ಮಹತ್ವವನ್ನು ಸವಿಸ್ತಾರವಾಗಿ ತಿಳಿಸಿದರು. ಮಕ್ಕಳಿಗೆ ಮಣ್ಣು ಮಾದರಿ ಸಂಗ್ರಹಿಸುವ ವಿಧಾನವನ್ನು ಕ್ಷೇತ್ರಮಟ್ಟದಲ್ಲಿ ಪ್ರಾತ್ಯಕ್ಷಿಕೆ ಮುಖಾಂತರ ತೋರಿಸಿದರು.
ಕಾರ್ಯಕ್ರಮದಲ್ಲಿ ಏಕಲವ್ಯ ಮಾದರಿ ವಸತಿ ಶಾಲೆಯ ಪ್ರಾಂಶುಪಾಲ ಮಾರೆಪ್ಪ, ಆತ್ಮ ಯೋಜನೆಯ ಉಪ ಯೋಜನಾ ನಿರ್ದೇಶಕರಾದ ಕವಿತಾ ಕುಮಾರಿ, ತಾಲ್ಲೂಕು ತಾಂತ್ರಿಕ ವ್ಯವಸ್ಥಾಪಕರಾದ ವಾಣಿ ಕೋರಪ್ಪಳ, ಕೃಷಿ ಸಂಜೀವಿನಿಯ ತಾಂತ್ರಿಕ ಸಹಾಯಕ ಮಣಿಕೃಷ್ಣ ಸೇರಿದಂತೆ ಶಾಲಾ ಶಿಕ್ಷಕರು ಹಾಗೂ ಸಿಬ್ಬಂದಿ ಹಾಜರಿದ್ದರು.




