7, 8 ಮತ್ತು 9 ನೇ ತರಗತಿಯ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

2 years ago

ಧಾರವಾಡ: ಧಾರವಾಡದ ಸಾಧನಕೇರಿಯ ಸರ್ಕಾರಿ ಆದರ್ಶ ವಿದ್ಯಾಲಯ ಶಾಲೆಯಲ್ಲಿ 2024-25ನೇ ಸಾಲಿನಲ್ಲಿ 7, 8 ಮತ್ತು 9 ನೇ ತರಗತಿಯಲ್ಲಿ ಖಾಲಿ ಇರುವ ಸ್ಥಾನಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಆಸಕ್ತ ವಿದ್ಯಾರ್ಥಿಗಳು ಸೂಕ್ತ ದಾಖಲೆಗಳೊಂದಿಗೆ ಜೂನ್ 21 ರೊಳಗಾಗಿ ಅರ್ಜಿ ಸಲ್ಲಿಸಬೇಕು. ವಿದ್ಯಾರ್ಥಿಗಳಿಗೆ ಜೂನ್ 25 ರಂದು ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ, ಆಯ್ಕೆ ಮಾಡಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಮುಖ್ಯ ಶಿಕ್ಷಕರ ದೂರವಾಣಿ ಸಂಖ್ಯೆ:9741779832 ಗೆ ಸಂಪರ್ಕಿಸಬಹುದು ಎಂದು ಸರ್ಕಾರಿ ಆದರ್ಶ ವಿದ್ಯಾಲಯದ ಮುಖ್ಯೋಪಾಧ್ಯಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply