ಧಾರವಾಡ: ಧಾರವಾಡದಲ್ಲಿ ಕೇಂದ್ರ ಕಚೇರಿ ಹೊಂದಿರುವ ರಾಜ್ಯ ಕರ್ನಾಟಕ ಬಾಲ ವಿಕಾಸ ಅಕಾಡೆಮಿಯ ನೂತನ ಅಧ್ಯಕ್ಷರಾಗಿ ಸಂಗಮೇಶ ಬಬಲೇಶ್ವರ ಅವರು ನಗರದ ಯಾಲಕ್ಕಿ ಶೆಟ್ಟರ್ ಕಾಲನಿಯಲ್ಲಿನ ಅಕಾಡೆಮಿ ಕೇಂದ್ರ ಕಚೇರಿಯಲ್ಲಿ ಅಧಿಕಾರ ವಹಿಸಿಕೊಂಡರು.
- ಭಾರತ ಕಲ್ಯಾಣ ರಾಷ್ಟ್ರವಾಗಲು ಅಂಬೇಡ್ಕರರ ವಿಚಾರಗಳನ್ನು ಅಳವಡಿಸಿಕೊಳ್ಳಬೇಕು: ಕೆ.ವೈ.ನಾರಾಯಣಸ್ವಾಮಿ
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
ಅಧಿಕಾರ ಸ್ವೀಕರಿಸಿದ ನಂತರ ಮಾತನಾಡಿದ ಅವರು, ಸರಕಾರ ತಮ್ಮ ಮೇಲೆ ಭರವಸೆಯಿಟ್ಟು ಈ ಜವಾಬ್ದಾರಿ ವಹಿಸಿದೆ. ಅಕಾಡೆಮಿಯ ಸಿಬ್ಬಂದಿಗೆ ವೇತನ ಮತ್ತು ಕಾರ್ಯಚಟುವಟಿಕೆಗಳನ್ನು ನಡೆಸಲು ಅಗತ್ಯ ಅನುದಾನ ಪಡೆಯಲಾಗುವುದು. ಈ ಮೂಲಕ ಅಕಾಡೆಮಿ ನಿರಂತರವಾಗಿ ಕಾರ್ಯನಿರ್ವಹಿಸುವ ವ್ಯವಸ್ಥೆ ಮಾಡುವುದಾಗಿ ಹೇಳಿದರು.
ಕೈಗಾರಿಕೆಗಳಿಂದ ಸಿಎಸ್ ಆರ್ ಅನುದಾನ ಪಡೆದು ಇನ್ನೂ ಅಧಿಕ ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನಗೊಳಿಸುವ ಉದ್ದೇಶವಿದೆ. ಈ ದಿಸೆಯಲ್ಲಿ ಅಕಾಡೆಮಿ ಸಿಬ್ಬಂದಿ ಮತ್ತು ಪರಿಣಿತರ ಜೊತೆ ಸಮಾಲೋಚನೆ ನಡೆಸುವುದಾಗಿ ಹೇಳಿದರು.
ಬಾಲ ವಿಕಾಸ ಅಕಾಡೆಮಿಯನ್ನು ಕ್ರಿಯಾಶೀಲಗೊಳಿಸುವ ಪಣತೊಟ್ಟು, ಅಕಾಡೆಮಿಯ ನೇತೃತ್ವವಹಿಸಿಕೊಂಡಿದ್ದೇನೆ ಎಂದರು.
ಈ ಸಂದರ್ಭದಲ್ಲಿ ಅಕಾಡೆಮಿಯ ಯೋಜನಾಧಿಕಾರಿ ಭಾರತಿ ಶೆಟ್ಟರ್ ಹಾಗೂ ಮಲ್ಲನಗೌಡ ಪಾಟೀಲ, ಬಿ.ವೈ.ಪಾಟೀಲ, ದಶರಥರಾವ ದೇಸಾಯಿ, ಬಸವರಾಜ ಮರಿತಮ್ಮನವರ, ಶಿವಶರಣ ಕಲಬಶೆಟ್ಟರ್ ಸೇರಿದಂತೆ ಇತರರು ಹಾಜರಿದ್ದರು.
ಬಬಲೇಶ್ವರ ತಾಲೂಕಿನ ಮಮದಾಪೂರ ಗ್ರಾಮದ ಸಂಗಮೇಶ ಅವರು, ತಮ್ಮ ಉನ್ನತ ಶಿಕ್ಷಣವನ್ನು ಧಾರವಾಡದಲ್ಲಿಯೇ ಪೂರೈಸಿದ್ದಾರೆ. ಕರ್ನಾಟಕ ಕಾಲೇಜಿನ ಪ್ರತಿಭಾವಂತ ವಿದ್ಯಾರ್ಥಿ ಆಗಿದ್ದ ಅವರು, ವಿದ್ಯಾರ್ಥಿ ಜೀವನದಿಂದ ಸಮಾಜಮುಖಿ ಚಿಂತನೆ, ಸಾಮಾಜಿಕ ಕಾರ್ಯ ಮತ್ತು ಸಮುದಾಯ ಅಭಿವೃದ್ಧಿಯ ಕಳಕಳಿ ಹೊಂದಿದ್ದಾರೆ.




