ಬೆಂಗಳೂರು: ಕೇಂದ್ರ ಸರಕಾರ ವರ್ಷಕ್ಕೆ 2,50,000 ಕೋಟಿ ರೂ.ಗಳಷ್ಟು ಅಗಾಧ ಸೆಸ್ ಸಂಗ್ರಹಿಸುತ್ತಿದ್ದರೂ ಅದರ ಹಂಚಿಕೆಯಲ್ಲಿ ಕರ್ನಾಟಕದಂತಹ ಪುರೋಗಾಮಿ ರಾಜ್ಯಗಳಿಗೆ ಅನ್ಯಾಯ ಮಾಡುತ್ತಿದೆ ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಆರೋಪಿಸಿದ್ದಾರೆ.
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
- ಜನಸಹಭಾಗಿತ್ವದೊಂದಿಗೆ ಸ್ವಚ್ಛತಾ ಅಭಿಯಾನಕ್ಕೆ ಸಜ್ಜು
- UPI ಡಿಜಿಟಲ್ ಮೇಲಿನ ಹೆಚ್ಚುವರಿ ಶುಲ್ಕ ಪ್ರಸ್ತಾವನೆ ಹಿಂಪಡೆಯಬೇಕು
- ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ: ಪೌರ ಕಾರ್ಮಿಕರಿಗೆ ಸನ್ಮಾನ
ತೆರಿಗೆ ಪಾವತಿಯಲ್ಲಿ ಕರ್ನಾಟಕ, ತಮಿಳುನಾಡು, ತೆಲಂಗಾಣದಂತಹ ರಾಜ್ಯಗಳು ಮುಂಚೂಣಿಯಲ್ಲಿವೆ. ಆದರೆ, ಇದಕ್ಕೆ ಪ್ರತಿಯಾಗಿ ಕೇಂದ್ರ ಸರಕಾರದಿಂದ ಈ ರಾಜ್ಯಗಳಿಗೆ ನ್ಯಾಯೋಚಿತ ಪಾಲು ಬರುತ್ತಿಲ್ಲ. ಬದಲಿಗೆ ಹೆಚ್ಚಿನ ಪಾಲೆಲ್ಲ ಉತ್ತರಪ್ರದೇಶ ಮತ್ತು ಬಿಹಾರದಂತಹ ರಾಜ್ಯಗಳಿಗೆ ಹೋಗುತ್ತಿದೆ. ಇದು ಖಂಡಿತವಾಗಿಯೂ ಪ್ರಶ್ನಾರ್ಹ ಎಂದಿದ್ದಾರೆ.
ಪರಿಸ್ಥಿತಿ ಹೀಗೆಯೇ ಮುಂದುವರಿದರೆ ಕರ್ನಾಟಕದಂತಹ ರಾಜ್ಯಗಳು ತಮಗೆ ಬರಬೇಕಾದ ತೆರಿಗೆ ಪಾಲಿಗಾಗಿ ಸುಪ್ರೀಂಕೋರ್ಟ್ ಮೆಟ್ಟಿಲೇರಿ, ಸಾರ್ವಜನಿಕ ಹಿತಾಸಕ್ತಿ ಅರ್ಜಿ ಹಾಕಬೇಕಾದ ಪ್ರಮೇಯ ಬರುತ್ತದೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.




