ಬೆಂಗಳೂರು: ಡೀಸೆಲ್ ಹಾಗೂ ಪೆಟ್ರೋಲ್ ಮಾರಾಟ ದರ ಹೆಚ್ಚಳ ಮಾಡಿದ ಬೆನ್ನಲ್ಲೇ ಇದೀಗ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್ಆರ್ಟಿಸಿ ಹಾಗೂ ಬಿಎಂಟಿಸಿ) ಬಸ್ ಪ್ರಯಾಣ ದರವನ್ನು ಹೆಚ್ಚಳ ಮಾಡಲು ಸಿದ್ಧತೆ ನಡೆಸಿದೆ.
- ವರ್ಷದ ಬಳಿಕ ಸೆರೆಮನೆಯಿಂದ ಹೊರಬಂದ ನಟಿ ರನ್ಯಾ ರಾವ್!
- ಪ್ರೊ. ಎಸ್. ಬಿಳಿಗಿರಿ ವಾಸನ್ ಅವರಿಗೆ ಅಭಿನಂದನಾ ಸಮಾರಂಭ
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸುಗಳ ಪ್ರಯಾಣ ದರ ಹೆಚ್ಚಳ ಮಾಡಿ ಹಲವು ವರ್ಷಗಳೇ ಕಳೆದಿವೆ. ಇದೀಗ ತೈಲ ಬೆಲೆಗೆ ಹೆಚ್ಚಳ ವಾಹನದ ಬಿಡಿ ಭಾಗ ಹೆಚ್ಚಳ ಮತ್ತು ನೌಕರರ ಸಂಬಳ ಹೆಚ್ಚಳದ ಹಿನ್ನೆಲೆಯಲ್ಲಿ ಶೇ.25 ರಿಂದ 35ರಷ್ಟು ಟಿಕೆಟ್ ದರ ಹೆಚ್ಚಳದ ಪ್ರಸ್ತಾವನೆಯನ್ನು ಸಾರಿಗೆ ಇಲಾಖೆ ಸಲ್ಲಿಸಿದೆ.
ಲೋಕಸಭೆ ಚುನಾವಣೆಗೂ ಮೊದಲೇ ದರ ಹೆಚ್ಚಳದ ಪ್ರಸ್ತಾವನೆಯನ್ನು ಸಲ್ಲಿಸಿದ್ದು, ಅಂತಿಮವಾಗಿ ದರ ಪರಿಷ್ಕರಣೆ ತೀರ್ಮಾನವನ್ನು ಸಿಎಂ ಸಿದ್ದರಾಮಯ್ಯ ವಿವೇಚನೆಗೆ ಬಿಡಲಾಗಿದೆ. ಮೂಲಗಳ ಪ್ರಕಾರ, ಮುಂದಿನ ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಬಸ್ ದರ ಪರಿಷ್ಕರಣೆ ಕುರಿತು ಸರ್ಕಾರ ಯಾವುದಾದರೂ ಒಂದು ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆಯಿದೆ.
ಮೂಲಗಳ ಪ್ರಕಾರ, ಸರ್ಕಾರ ಈ ಬಾರಿ ಬಸ್ ಪ್ರಯಾಣದ ದರವನ್ನು ಶೇ.15 ರಿಂದ 25ರಷ್ಟು ಹೆಚ್ಚಳ ಮಾಡುವ ಸಾಧ್ಯತೆಯಿದೆ. ಡೀಸೆಲ್ ಹಾಗೂ ಪೆಟ್ರೋಲ್ ದರ ಹೆಚ್ಚಳ ಮಾಡುವುದರಿಂದ ಕೆಎಸ್ಆರ್ಟಿಸಿಗೆ ವಾರ್ಷಿಕ 65 ಕೋಟಿ ರೂ. ಹಾಗೂ ಬಿಎಂಟಿಸಿಗೆ 32 ಕೋಟಿ ರೂ. ಹೊರೆಯಾಗುತ್ತದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಕೆಎಸ್ಆರ್ಟಿಸಿ ಪ್ರತಿದಿನ ಬಸ್ಗಳ ಕಾರ್ಯಾಚರಣೆಗೆ 6.2 ಲಕ್ಷ ಲೀಟರ್ ಡೀಸೆಲ್ ಖರೀದಿಸುತ್ತಿದೆ. ಇದರಿಂದ ತಿಂಗಳಿಗೆ 5.4 ಕೋಟಿ ಹಾಗೂ ವಾರ್ಷಿಕ 65 ಕೋಟಿಗೆ ಹೆಚ್ಚಳವಾಗಲಿದೆ. ಆದ್ದರಿಂದ ಬಸ್ ದರ ಏರಿಸುವುದು ಅನಿವಾರ್ಯ ಎಂದು ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.



