ದರ್ಶನ್ – ರೇಣುಕಾ ಸ್ವಾಮಿ – ಪಾರದರ್ಶಕ ವಿಚಾರಣೆ ಕುರಿತು ನಟ ಉಪೇಂದ್ರ ಹೇಳಿದ್ದೇನು?

2 years ago

ಬೆಂಗಳೂರು: ಕಳೆದ ಕೆಲವು ದಿನಗಳಿಂದ ನಡೆಯುತ್ತಿರುವ ದರ್ಶನ್ ಬಂಧನ ರೇಣುಕಾ ಸ್ವಾಮಿ ಕೊಲೆ ಪ್ರಕರಣ ಮತ್ತು ಅದರ ವಿಚಾರಣೆ ಇಡೀ ಕರ್ನಾಟಕ ಮಾತ್ರವಲ್ಲ ಇಡೀ ಭಾರತವೇ ಬೆರಗಾಗಿ ನೋಡುತ್ತಿದೆ ಎಂದು ನಟ, ನಿರ್ದೇಶಕ ಮತ್ತು ಪ್ರಜಾಕೀಯ ಪಕ್ಷದ ಸಂಸ್ಥಾಪಕ ಅಧ್ಯಕ್ಷ ಉಪೇಂದ್ರ ಹೇಳಿದ್ದಾರೆ.

ನಟ ದರ್ಶನ್ ಮತ್ತು ಸಹಚರರ ಬಂಧನ ಮತ್ತು ಇದರ ಬೆಳವಣಿಗೆಗಳ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿಕ್ರಿಯೆ ನೀಡಿರುವ ಉಪೇಂದ್ರ, ಈ ಹೈ ಪ್ರೊಫೈಲ್ ಕೇಸ್ ನ ವಿಚಾರಣೆಯಲ್ಲಿ ನಿಶ್ಪಕ್ಷಪಾತವಾದ ನಿರ್ಣಯ ಮತ್ತು ನ್ಯಾಯಕ್ಕಾಗಿ ಕಾಯುತ್ತಿದ್ದಾರೆ ಎಂದಿದ್ದಾರೆ.

ರೇಣುಕಾ ಸ್ವಾಮಿ ಕುಟುಂಬದಲ್ಲಿ, ಜನರಲ್ಲಿ, ಟೀವಿ ಮಾಧ್ಯಮಗಳಲ್ಲಿ ಮತ್ತು ದರ್ಶನ್ ಅಭಿಮಾನಿಗಳಲ್ಲಿ ಏನೇನೋ ಆತಂಕ, ಅನುಮಾನಗಳು ಕಾಡುತ್ತಿದೆ. ಊಹಾಪೋಹಗಳು ಹುಟ್ಟಿಕೊಳ್ಳುತ್ತಿದೆ. ಏಕೆಂದರೆ, ಯಾವುದೇ ಕೇಸ್ ಆದರೂ ಆ ಕೇಸ್ ನ ವಿಚಾರಣೆಯ ವೀಡಿಯೋ ದಾಖಲೆಗಳನ್ನು ಮತ್ತು ಸಾಕ್ಷಿಗಳ ಎಲ್ಲಾ ವಿವರಗಳನ್ನು ಆಗಾಗ ಪೋಲೀಸರು ಸಂಬಂಧಪಟ್ಟ ವ್ಯಕ್ತಿಗಳ ಕುಟುಂಬದವರ ಜೊತೆ ಹಂಚಿಕೊಳ್ಳಬೇಕು ಮತ್ತು ಅದು ಕಾನೂನಾಗಬೇಕು. ( ಹಿಂದೆಲ್ಲಾ ಪೊಲೀಸರು ವಿಚಾರಣೆಯ ವಿವರ ಬರೆದು ದಾಖಲಿಸುತ್ತಿದ್ದರು ಈಗ ತಂತ್ರಜ್ಞಾನ ಇಷ್ಟೊಂದು ಮುಂದುವರೆದಿದ್ದು ಎಲ್ಲವನ್ನೂ ವೀಡಿಯೋ ರೆಕಾರ್ಡ್ ಮತ್ತು ಲೈವ್ ಸ್ಟ್ರೀಮಿಂಗ್ ಮಾಡಬಹುದು) (ಕಾನೂನು ಸುಧಾರಣೆಗಳು #CriminalJustice Reforms ) ಎಂದು ಅಭಿಪ್ರಾಯಪಟ್ಟಿದ್ದಾರೆ.

ಅದೇ ರೀತಿ ಒಬ್ಬ ಸಾರ್ವಜನಿಕ ವ್ಯಕ್ತಿಯ ಬಗ್ಗೆ ಕೇಸ್ ಆಗಿದ್ದರೆ ಆ ಕೇಸ್ ನ ವಿಚಾರಣೆಯ ವೀಡಿಯೋ ದಾಖಲೆಗಳನ್ನು ಮತ್ತು ಸಾಕ್ಷಿಗಳ ಎಲ್ಲಾ ವಿವರಗಳನ್ನು ಪೋಲೀಸರು ಆಗಾಗ ಸಾರ್ವಜನಿಕವಾಗಿ ತೆರೆದಿಡಬೇಕು ಎಂದಿದ್ದಾರೆ.

ಒಬ್ಬ ಸಾರ್ವಜನಿಕ ವ್ಯಕ್ತಿಯ ವಿಚಾರಣೆ ಸಾರ್ವಜನಿಕವಾಗೇ ಸಂಪೂರ್ಣ ಪಾರದರ್ಶಕತೆಯಿಂದ ಆಗಬೇಕು, ಸಾಕ್ಷಿ ನಾಶ, ಪ್ರಭಾವಿಗಳ ಹಸ್ತಕ್ಷೇಪ, ಭ್ರಷ್ಟಾಚಾರ ಇವಕ್ಕೆಲ್ಲಾ ತೆರೆ ಎಳೆದಂತಾಗುತ್ತದೆ. ಆಗ ರೇಣುಕಾ ಸ್ವಾಮಿ ಕುಟುಂಬಕ್ಕೆ, ಜನರಿಗೆ, ಟೀವಿ ಮಾಧ್ಯಮಗಳಿಗೆ ಮತ್ತು ದರ್ಶನ್ ಅಭಿಮಾನಿಗಳಿಗೆ ಮನಸಿನಲ್ಲಿ ಗೊಂದಲಗಳಿಲ್ಲದೆೇ ಪೋಲೀಸ್ ಮತ್ತು ಟೀವಿ ಮಾಧ್ಯಮಗಳ ಬಗ್ಗೆ ಇನ್ನೂ ಗೌರವ ಹೆಚ್ಚಾಗುತ್ತದೆ ಮತ್ತು ನ್ಯಾಯ ಸಿಗುತ್ತದೆ ಎಂಬ ನಂಬಿಕೆ ಬರುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

Leave a Reply