ಬೆಂಗಳೂರು: ಗ್ಯಾರಂಟಿ ಯೋಜನೆಗಳು ದುರ್ಬಲರಿಗೆ ಆರ್ಥಿಕವಾಗಿ ಶಕ್ತಿ ತುಂಬಿವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಬಿಬಿಎಂಪಿ ಗ್ಯಾರಂಟಿ ಯೋಜನೆಗಳ ನೂತನ ಕಛೇರಿ ಉದ್ಘಾಟಿಸಿ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳ ಸಮಿತಿಯನ್ನು ರಾಜ್ಯ ಮಟ್ಟದಲ್ಲಿ ಜಾರಿಗೆ ತಂದಿದೆ ಎಂದರು.

ಗ್ಯಾರಂಟಿ ಯೋಜನೆ ಜಿಲ್ಲಾ ಮಟ್ಟದ ಅಧ್ಯಕ್ಷರಿಗೆ 50 ಸಾವಿರ ಮತ್ತು ತಾಲೂಕು ಮಟ್ಟದ ಅಧ್ಯಕ್ಷರಿಗೆ 25 ಸಾವಿರ ರೂಪಾಯಿ ವೇತನ ನೀಡಲಾಗುತ್ತಿದೆ. ಜಿಲ್ಲೆ, ತಾಲೂಕು ಮತ್ತು ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಗ್ಯಾರಂಟಿ ಯೋಜನೆ ಸಮಿತಿಯ ಕಛೇರಿ ತೆರಯಲಾಗುತ್ತದೆ. ಖಾಲಿ ಇರುವ ಗ್ಯಾರಂಟಿ ಯೋಜನೆ ಸಮಿತಿಗೆ ಭರ್ತಿ ಮಾಡಲಾಗುತ್ತದೆ. ಗ್ಯಾರಂಟಿ ಯೋಜನೆಗಳ ಪರಿಶೀಲನೆ ಮತ್ತು ಸಮರ್ಪಕವಾಗಿ ತಲುಪಿದಿಯ ಎಂಬ ಪರಿಶೀಲನೆ ಜವಾಬ್ದಾರಿ ಹೊಂದಿದೆ ಎಂದರು.

ಜಿ.ಕೃಷ್ಣಪ್ಪ ಮಾತನಾಡಿ ಕೆಪಿಸಿಸಿ ಅಧ್ಯಕ್ಷರು, ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ರವರು ಮತ್ತು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯರವರ ನೇತೃತ್ವದಲ್ಲಿ ಚುನಾವಣೆ ಪೂರ್ವದಲ್ಲಿ ನೀಡಿದ 5 ಗ್ಯಾರಂಟಿ ಯೋಜನೆಗಳನ್ನು ರಾಜ್ಯದಲ್ಲಿ ಸಮರ್ಪಕವಾಗಿ ಜಾರಿಗೆ ತಂದಿದೆ. ರಾಜ್ಯದ ಪ್ರತಿ ಕುಟುಂಬವು ಗ್ಯಾರಂಟಿ ಯೋಜನೆಯ ಲಾಭ ತಲುಪಿದೆ ಎಂದರು.
ಅನ್ನಭಾಗ್ಯ ಮತ್ತು 200 ಯೂನಿಟ್ ವಿದ್ಯುತ್ ಉಚಿತ, ಮನೆಯ ಯಾಜಮಾನಿಗೆ 2000 ರೂ. ಸಹಾಯಧನ, ಶಕ್ತಿ ಯೋಜನೆ ಮಹಿಳೆಯರಿಗೆ ಬಸ್ ಪ್ರಯಾಣ ಉಚಿತ, ಯುವ ನಿಧಿ ಯೋಜನೆಗಳು ಬಡವರ ಮತ್ತು ಮಧ್ಯಮ ವರ್ಗದ ಕುಟುಂಬದವರಿಗೆ ಆರ್ಥಿಕವಾಗಿ ಶಕ್ತಿ ತುಂಬಿದೆ ಎಂದರು.
ಬೆಂಗಳೂರು ನಗರ ಪ್ರದೇಶದಲ್ಲಿ 28 ವಿಧಾನಸಭಾ ಕ್ಷೇತ್ರದಲ್ಲಿ ಅಧ್ಯಕ್ಷರನ್ನ ನೇಮಕ ಮಾಡಲಾಗಿದೆ. ಗ್ಯಾರಂಟಿ ಯೋಜನೆ ಅರ್ಹ ಫಲಾನುಭವಿಗಳನ್ನು ಭೇಟಿ ಮಾಡಿ ಕಾಂಗ್ರೆಸ್ ಪಕ್ಷದ ಕೊಡುಗೆಯನ್ನ ತಿಳಿಸಲಾಗುತ್ತದೆ. ಕಾಂಗ್ರೆಸ್ ಪಕ್ಷ ಬಡವರ ಪರ ಧ್ವನಿಯಾಗಿ ಅವರ ಜೀವನವನ್ನು ಕೈಹಿಡಿಯವ ಕೆಲಸ ಮಾಡುತ್ತಿದೆ ಎಂದರು.
ಬಿಬಿಎಂಪಿ ಕೇಂದ್ರ ಕಛೇರಿ: ಬಿಬಿಎಂಪಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ನೂತನ ಕಛೇರಿಯ ಲೋಕರ್ಪಣೆ ಸಮಾರಂಭ.
ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ, ವಿಧಾನಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್, ವಿಧಾನಪರಿಷತ್ ಸದಸ್ಯರಾದ ಸಲೀಮ್ ಅಹಮದ್, ಬಿಬಿಎಂಪಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಜಿ.ಕೃಷ್ಣಪ್ಪ, ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ಶಾಸಕ ಪ್ರಿಯಾಕೃಷ್ಣ, ಮಾಜಿ ಉಪಮೇಯರ್ ಎಲ್.ಶ್ರೀನಿವಾಸ್, ಮಹಾನಗರ ಪಾಲಿಕೆ ಮಾಜಿ ಸದಸ್ಯರು, ಗ್ಯಾರಂಟಿ ಯೋಜನೆಗಳ ಅಧ್ಯಕ್ಷರು, ಸದಸ್ಯರು ಮತ್ತು ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.




