ಬಳ್ಳಾರಿ: ಕುರುಗೋಡು ಪುರಸಭೆ ವ್ಯಾಪ್ತಿಯಲ್ಲಿ ಸ್ವಚ್ಛ ಭಾರತ್ ಮಿಷನ್ ಯೋಜನೆ(ನಗರ) 2.0 ಯೋಜನೆಯಡಿಯಲ್ಲಿ ವೈಯಕ್ತಿಕ ಶೌಚಾಲಯ ನಿರ್ಮಾಣ ಮಾಡಿಕೊಳ್ಳಲು ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಕುರುಗೋಡು ಪುರಸಭೆ ಮುಖ್ಯಾಧಿಕಾರಿಗಳು ತಿಳಿಸಿದ್ದಾರೆ.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಕುರುಗೋಡು ಪುರಸಭೆಗೆ ಒಟ್ಟು 66 ವೈಯಕ್ತಿಕ ಶೌಚಾಲಯ ಗುರಿ ನಿಗಧಿಪಡಿಸಿದ್ದು, 43 ಅರ್ಜಿ ಸ್ವೀಕೃತಗೊಂಡಿವೆ. ಉಳಿದ 23 ವೈಯಕ್ತಿಕ ಶೌಚಾಲಯ ನಿರ್ಮಿಸಿಕೊಳ್ಳಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಕುರುಗೋಡು ಪುರಸಭೆ ವ್ಯಾಪ್ತಿಯಲ್ಲಿ ವೈಯಕ್ತಿಕ ಶೌಚಾಲಯಗಳನ್ನು ಹೊಂದದೇ ಇರುವ ಮತ್ತು ಈ ಹಿಂದೆ ವೈಯಕ್ತಿಕ ಶೌಚಾಲಯಕ್ಕೆ ಪುರಸಭೆಯಿಂದ ಯಾವುದೇ ಅನುದಾನ ಪಡೆಯದೇ ಇರುವ ಫಲಾನುಭವಿಗಳು ತಮ್ಮ ಸ್ವಂತ ಜಾಗದಲ್ಲಿ ಶೌಚಾಲಯ ನಿರ್ಮಿಸಿಕೊಳ್ಳಲು ಸಹಾಯಧನ ಪಡೆಯಬಹುದು.
ಅರ್ಜಿಗಳನ್ನು ಜೂ.21 ರೊಳಗಾಗಿ ಕಚೇರಿ ಸಮಯದಲ್ಲಿ ಪುರಸಭೆ ಕಾರ್ಯಾಲಯಕ್ಕೆ ಸಲ್ಲಿಸಬೇಕು. ಅವಧಿ ಮೀರಿ ಬಂದಂತಹ ಅರ್ಜಿಗಳನ್ನು ಪರಿಗಣಿಸುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಕುರುಗೋಡು ಪುರಸಭೆ ಕಾರ್ಯಾಲಯ ಕಚೇರಿ ಅಥವಾ ದೂ.08393-263166ಗೆ ಸಂಪರ್ಕಿಸಬಹುದು.




