ಬಳ್ಳಾರಿ: ಪ್ರಸ್ತಕ ಸಾಲಿನಲ್ಲಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಪರಿಶಿಷ್ಟ ಪಂಗಡದ ಕಾನೂನು ಪದವೀಧರರಿಗೆ ಕಾನೂನು ವೃತ್ತಿ ತರಬೇತಿ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ದಿವಾಕರ ತಿಳಿಸಿದ್ದಾರೆ.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಪರಿಶಿಷ್ಟ ಪಂಗಡದ ಕಾನೂನು ಪದವೀಧರರಿಗೆ 2024-25 ನೇ ಸಾಲಿನ ಆಡಳಿತ ನ್ಯಾಯಾಧೀಕರಣದಲ್ಲಿ ಎರಡು ವರ್ಗಗಳ ವೃತ್ತಿ ತರಬೇತಿಯಲ್ಲಿ ಶಿಷ್ಯವೇತನ ನೀಡಲಾಗುತ್ತದೆ. ಅರ್ಹ ಪದವೀಧರರು ಜೂನ್ 30ರ ಒಳಗಾಗಿ ಇಲಾಖೆಯ ವೆಬ್ಸೈಟ್ www.tw.kar.nic.in ಗೆ ಭೇಟಿ ನೀಡಿ ಅರ್ಜಿಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ನಗರದ ನಲ್ಲಚೆರವು ಪ್ರದೇಶದಲ್ಲಿನ ವಾಲ್ಮೀಕಿ ಭವನದ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಗೆ ಸಂಪರ್ಕಿಸಬಹುದು.




