ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2 years ago

ಸ್ವಯಂ ಉದ್ಯೋಗ ಹಾಗೂ ಗುಂಪು ಉದ್ಯೋಗ ಪ್ರಾರಂಭಿಸುವವರಿಗೆ ನೆರವು

ಧಾರವಾಡ: 2024-25ನೇ ಸಾಲಿನಲ್ಲಿ ನವಲಗುಂದ ಪುರಸಭೆಯ ವ್ಯಾಪ್ತಿಯಲ್ಲಿ ಅನುಷ್ಠಾನಗೊಳ್ಳುತ್ತಿರುವ ಡೇ-ನಲ್ಮ ಯೋಜನೆ ಸ್ವಯಂ ಉದ್ಯೋಗ ಹಾಗೂ ಗುಂಪು ಉದ್ಯೋಗ ಕಾರ್ಯಕ್ರಮದಡಿ ರಾಷ್ಟ್ರೀಯ ಜೀವನೋಪಾಯ ಅಭಿಯಾನ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆಯಿಂದ ಆರ್ಥಿಕ ಹಾಗೂ ಭೌತಿಕ ಗುರಿ ನಿಗದಿಪಡಿಸಿದ್ದು, ಸ್ವಯಂ ಉದ್ಯೋಗ ಹಾಗೂ ಗುಂಪು ಉದ್ಯೋಗ ಪ್ರಾರಂಭಿಸುವವರಿಗೆ ಶೇ. 7 ಕ್ಕಿಂತ ಹೆಚ್ಚಿನ ಬಡ್ಡಿ ಸಹಾಯಧನದೊಂದಿಗೆ ಬ್ಯಾಂಕಿನ ಮೂಲಕ ಸಾಲ ಸೌಲಭ್ಯ ಪಡೆಯಲು 18 ರಿಂದ 45 ವರ್ಷದೊಳಗಿನ ಯುವಕ, ಯುವತಿಯರು ಹಾಗೂ ಸ್ವ-ಸಹಾಯ ಗುಂಪುಗಳು ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸುವವರು ಕಚೆರಿಯಿಂದ ಅರ್ಜಿಗಳನ್ನು ಪಡೆದು ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಆಧಾರಕಾರ್ಡ್, 2 ಭಾವಚಿತ್ರಗಳು ಹಾಗೂ ಆಸಕ್ತಿ ಹೊಂದಿದ ಸ್ಥಳೀಯ ಬ್ಯಾಂಕ್ ಪಾಸ್ ಬುಕ್ ನೊಂದಿಗೆ ಜುಲೈ 15, 2024 ರೊಳಗಾಗಿ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ; 083802-229247 ಗೆ ಸಂಪರ್ಕಿಸಬಹುದು.

Leave a Reply