ಮೊರಾರ್ಜಿ ದೇಸಾಯಿ ಪದವಿ ಪೂರ್ವ ಕಾಲೇಜು ಮತ್ತು ಪ.ಪೂ ಬಾಲಕರ, ಬಾಲಕಿಯರ ವಿದ್ಯಾರ್ಥಿನಿಲಯಕ್ಕಾಗಿ ಬಾಡಿಗೆ ಕಟ್ಟಡಗಳಿಗಾಗಿ ಅರ್ಜಿ ಆಹ್ವಾನ
ಧಾರವಾಡ: ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಪದವಿ ಪೂರ್ವ ಕಾಲೇಜಿನಲ್ಲಿ 240 ವಿದ್ಯಾರ್ಥಿಗಳು ವ್ಯಾಸಂಗ ಮಾಡಲು ಅನುಕೂಲವಾಗುವಂತಹ ಎಲ್ಲ ಸೌಲಭ್ಯಗಳನ್ನು ಒಳಗೊಂಡಿರುವ ಬಾಡಿಗೆ ಕಟ್ಟಡ ಅವಶ್ಯಕವಿದೆ.
- ಸಿಎನ್ಎನ್, ಎಂಎಸ್ಎನ್ಬಿಸಿ, ಪಾಲಿಟಿಕೋಗೆ ಶ್ವೇತಭವನ ಪ್ರವೇಶ ನಿಷೇಧಿಸಿದ ಟ್ರಂಪ್
- ಕೆರೆಗಳ ಪುನಶ್ಚೇತನಕ್ಕೆ ₹150 ಕೋಟಿ ವೆಚ್ಚದ ವಿಶ್ವಬ್ಯಾಂಕ್ ಯೋಜನೆ: ಈಶ್ವರ್ ಖಂಡ್ರೆ
- ದಶಕ ಮೀರಿದ ಕಾನೂನು ಹಾದಿ ಮತ್ತು ಉತ್ತರವಿಲ್ಲದ ಪ್ರಶ್ನೆಗಳು
- ಪರಿಸರವನ್ನೂ ಉಳಿಸಬೇಕು, ಮಲೆನಾಡಿನ ರೈತರ ಬದುಕನ್ನೂ ಉಳಿಸಬೇಕು: ಮಧು ಬಂಗಾರಪ್ಪ
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
ಕಟ್ಟಡವನ್ನು ಬಾಡಿಗೆ ನೀಡಲು ಆಸಕ್ತಿವುಳ್ಳವರು ಜೂನ್ 26, 2024 ರೊಳಗಾಗಿ ಧಾರವಾಡ ಜಿಲ್ಲಾ ಅಧಿಕಾರಿಗಳ ಕಾರ್ಯಾಲಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗೆ ಅರ್ಜಿ ಸಲ್ಲಿಸಬಹುದು. ಮತ್ತು 2024-25 ನೇ ಸಾಲಿನಲ್ಲಿ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳನ್ನು ಪ್ರಾರಂಭಿಸಲು ಎಲ್ಲ ಸೌಲಭ್ಯಗಳನ್ನು ಒಳಗೊಂಡಿರುವ ಬಾಡಿಗೆ ಕಟ್ಟಡ ಅವಶ್ಯವಿದೆ.
ಕಟ್ಟಡವನ್ನು ಬಾಡಿಗೆ ನೀಡಲು ಆಸಕ್ತಿವುಳ್ಳವರು ಜೂನ್ 26, 2024 ರೊಳಗಾಗಿ ಧಾರವಾಡ ಜಿಲ್ಲಾ ಅಧಿಕಾರಿಗಳ ಕಾರ್ಯಾಲಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗೆ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ : 0836-2971590 ಅರಿವು ಕೇಂದ್ರ: 0836- 2971132 ಗೆ ಅಥವಾ ಮೌಲಾನಾ ಆಝಾದ ಭವನ, ಸಾಧನಕೇರಿ ರಸ್ತೆ, ಸರ್ಕಾರಿ ಮುದ್ರಣಾಲಯ ಹತ್ತಿರ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಅಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಗೋಪಾಲ ಎಚ್.ಲಮಾಣಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



