ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಜಾರಿಯಲ್ಲಿರುವ ಪೂರಕ ಪೌಷ್ಠಿಕ ಆಹಾರ ಕಾರ್ಯಕ್ರಮ ಯೋಜನೆ ಜಾರಿಯಲ್ಲಿ ಯಾವುದೇ ಲೋಪದೋಷ ಆಗದಂತೆ ಎಚ್ಚರಿಕೆ ವಹಿಸಬೇಕು. ನಿರ್ಲಕ್ಷ್ಯ ವಹಿಸಿದರೆ, ಸಂಬಂಧಪಟ್ಟ ಅಧಿಕಾರಿಗಳೇ ನೇರಹೊಣೆ ವಹಿಸಬೇಕಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಎಚ್ಚರಿಕೆ ನೀಡಿದ್ದಾರೆ.
- ದೇಶದ ರಾಜ್ಯಗಳಲ್ಲಿ ಕೊನೆಯ ಬಾರಿ ಕಾಂಗ್ರೆಸ್ ಸಿಎಂ ಇದ್ದದ್ದು ಯಾವಾಗ?
- ನಮ್ಮ ತಲೆಮಾರಿನ ರಾಜಕಾರಣಿಗಳು, ಭವಿಷ್ಯದ ಯುವ ನಾಯಕರಿಗೆ ಸಿದ್ದರಾಮಯ್ಯ ಸ್ಫೂರ್ತಿ: ಪ್ರಿಯಾಂಕ್ ಖರ್ಗೆ
- ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಸಿದ್ದರಾಮಯ್ಯ ಹೇಳಿದ್ದೇನು?
- ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ಯಾರು, ಏನೆಂದರು?
- ಹಣಕಾಸು ಮಂತ್ರಿಗಳಾಗಿ ಸಿದ್ದರಾಮಯ್ಯ ಸಾಧಿಸಿದ ಆರ್ಥಿಕ ಶಿಸ್ತು ಒಂದು ಪಠ್ಯದಂತಿದೆ: ಬಿ ಶ್ರೀಪಾದ ಭಟ್
ಇಲಾಖೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ಜಿಲ್ಲಾವಾರು ಕಾರ್ಯಕ್ರಮಗಳ ಕುರಿತು ಮಾಹಿತಿ ಪಡೆದರು. ಈ ವೇಳೆ, ಅಂಗನವಾಡಿ ಕೇಂದ್ರಗಳಿಗೆ ಪೂರೈಕೆಯಾಗುವ ಆಹಾರದಲ್ಲಿ ಗುಣಮಟ್ಟ ಕಾಪಾಡಿಕೊಳ್ಳಬೇಕು ಎಂದು ತಾಕೀತು ಮಾಡಿದರು.
ಅಂಗನವಾಡಿ ಕೇಂದ್ರಗಳಿಗೆ ಆಹಾರ ಪೂರೈಸಲಾಗುತ್ತಿರುವ ಎಂಎಸ್ಪಿಸಿ ಕೇಂದ್ರಗಳಿಗೆ ಖುದ್ದು ಭೇಟಿ ನೀಡಿ, ಆಹಾರ ಪದಾರ್ಥಗಳ ಗುಣಮಟ್ಟವನ್ನು ಪರಿಶೀಲಿಸಬೇಕು. ಪೋಷಣ್ ಯೋಜನೆಯಡಿ ಹೆಚ್ಚು ಮಕ್ಕಳನ್ನು ನೋಂದಾಯಿಸಲು ತ್ವರಿತ ಕ್ರಮಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.
ಮಳೆಗಾಲದ ಹಿನ್ನೆಲೆಯಲ್ಲಿ ಅಂಗನವಾಡಿ ಕೇಂದ್ರಗಳ ಸುತ್ತಮುತ್ತಲಿನ ಪ್ರದೇಶವನ್ನು ಸ್ವಚ್ಛವಾಗಿಡಬೇಕು. ವಿದ್ಯುತ್ ಪರಿವರ್ತಕ, ಮರ, ಗಿಡಗಳಿದ್ದರೆ ಅದನ್ನು ತೆರವುಗೊಳಿಸಬೇಕು. ಜಿಲ್ಲಾ ಮಟ್ಟದ ಅಧಿಕಾರಿಗಳು ತಾಲೂಕು ಮಟ್ಟದ ಶಿಶು ಸಂಯೋಜನಾಧಿಕಾರಿಗಳು (ಸಿಡಿಪಿಒ), ಪರಿವೀಕ್ಷಣಾ ಅಧಿಕಾರಿಗಳ ಜೊತೆ ಸಮನ್ವಯ ಸಾಧಿಸಿ, ಅಂಗನವಾಡಿ ಕೇಂದ್ರಗಳ ಅಭಿವೃದ್ಧಿಗೆ ಕ್ರಮಕೈಗೊಳ್ಳಬೇಕು ಎಂದರು.
ಅಂಗನವಾಡಿ ಕಾರ್ಯಕರ್ತೆಯರ ಬಹುದಿನಗಳ ಬೇಡಿಕೆಯಾಗಿದ್ದ ಗ್ರಾಚ್ಯುಟಿ ಮೊತ್ತವನ್ನು ಬಿಡುಗಡೆ ಮಾಡಲು ಕ್ರಮಕೈಗೊಳ್ಳಲಾಗಿದೆ. ಇದರಿಂದ ಸುಮಾರು 2,537 ಕಾರ್ಯಕರ್ತೆಯರಿಗೆ ಆರ್ಥಿಕವಾಗಿ ನೆರವಾಗಲಿದೆ. ಇದಕ್ಕಾಗಿ 29.91ಕೋಟಿ ರೂಪಾಯಿ ಮೊತ್ತವನ್ನು ಬಿಡುಗಡೆ ಮಾಡಲಾಗಿದೆ ಎಂದರು.
ಗ್ರಾಮಾಂತರ ಭಾಗದ ಕೆಲವೆಡೆ ನಡೆಯುತ್ತಿರುವ ಬಾಲ್ಯವಿವಾಹ ತಡೆಗಟ್ಟಲು ತೆಗೆದುಕೊಂಡಿರುವ ಕಾರ್ಯಕ್ರಮಗಳ ಮಾಹಿತಿ ಪಡೆದ ಅವರು, ಇನ್ಮುಂದೆ ರಾಜ್ಯದಲ್ಲಿ ಬಾಲ್ಯ ವಿವಾಹ ಆಗದಂತೆ ಎಚ್ಚರಿಕೆ ವಹಿಸಬೇಕು ಎಂದರು.




