ಬೆಂಗಳೂರು: ಬೀದರ್ ಗೆ ವಿಮಾನ ಯಾನ ಪುನರಾರಂಭಿಸಿ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಪತ್ರ ಬರೆದಿದ್ದಾರೆ.
- ಪ್ರೊ. ಎಸ್. ಬಿಳಿಗಿರಿ ವಾಸನ್ ಅವರಿಗೆ ಅಭಿನಂದನಾ ಸಮಾರಂಭ
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
ಕರುನಾಡ ಕಿರೀಟ ಎಂದೇ ಖ್ಯಾತವಾಗಿರುವ ಬೀದರ್ ಜಿಲ್ಲೆ ಬಸವಾದಿ ಪ್ರಮಥರ ಪುಣ್ಯಭೂಮಿಯಾಗಿದ್ದು, ಬಸವಕಲ್ಯಾಣದ ಅನುಭವ ಮಂಟಪ, ಬೀದರ್ ನಗರದಲ್ಲಿಯೇ ಇರುವ ನಾನಕ್ ಝೀರಾ ಗುರುದ್ವಾರ, ಮೊಹಮದ್ ಗವಾನರ ಮದರಸಾ, ನರಸಿಂಹ ಝರ್ನಾ ಬೀದರ್ ಕೋಟೆ-ಕರೇಜ್, ಪಾಪನಾಶ ಮೊದಲಾದ ಹಲವು ಪ್ರಮುಖ ಪ್ರವಾಸಿ ತಾಣಗಳಿಂದ ಕೂಡಿದೆ ಎಂದು ಹೇಳಿದ್ದಾರೆ.
ರಾಜ್ಯದ ರಾಜಧಾನಿ ಬೆಂಗಳೂರಿನಿಂದ ಸುಮಾರು 700 ಕಿ.ಮೀ. ದೂರದಲ್ಲಿರುವ ಬೀದರ್ ಗೆ ರಸ್ತೆ ಮತ್ತು ರೈಲು ಮಾರ್ಗವಾಗಿ ತಲುಪಲು 15 16 ಗಂಟೆಗಳಾಗುತ್ತದೆ. ಬೀದರ್ ಜಿಲ್ಲಾ ಕೇಂದ್ರಕ್ಕೆ ಉಡಾನ್ ಯೋಜನೆಯಡಿಯಲ್ಲಿ ನಾಗರಿಕ ವಿಮಾನಯಾನ ಸೇವೆ ಆರಂಭಿಸಿದ್ದರಿಂದ ಇಲ್ಲಿನ ಉದ್ಯಮಿಗಳಿಗೆ, ವಿದ್ಯಾರ್ಥಿಗಳಿಗೆ, ಪ್ರವಾಸಿಗರಿಗೆ, ನಾಗರಿಕರೆಗೆ ತುಂಬಾ ಅನುಕೂಲವಾಗಿತ್ತು ಎಂದಿದ್ದಾರೆ.
ಆದರೆ ಕಳೆದ 6 ತಿಂಗಳಿನಿಂದ ಕೇಂದ್ರ ಸರ್ಕಾರದಿಂದ ಸಬ್ಸಿಡಿ ಬಿಡುಗಡೆಯಾಗಿಲ್ಲ ಎಂಬ ಕಾರಣಕ್ಕೆ ನಾಗರಿಕ ವಿಮಾನಯಾನ ರದ್ದು ಮಾಡಲಾಗಿದ್ದು. ಈಗ ಬೀದರ್ ಜಿಲ್ಲೆಯ ಜನರು 4 ಗಂಟೆ ಪ್ರಯಾಣ ಮಾಡಿ ಹೈದ್ರಾಬಾದ್ ವಿಮಾನ ನಿಲ್ದಾಣಕ್ಕೆ ಹೋಗಬೇಕಾದ ಅನಿವಾರ್ಯತೆ ಬಂದಿದೆ. ಈ ನಿಟ್ಟಿನಲ್ಲಿ ನಾನು ಈ ಹಿಂದೆ ವಿಮಾನಯಾನ ಸೇವೆ ಪೂರೈಸಿದ್ದ ಸ್ಪಾರ್ ಏರ್ ನೊಂದಿಗೆ ಮಾತನಾಡಿದ್ದು. ಸಬ್ಸಿಡಿ ಕೊಟ್ಟರೆ ನಾಗರಿಕ ವಿಮಾನಯಾನ ಸೇವೆ ಪುನಾರಂಭ ಮಾಡುವುದಾಗಿ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ವಿಮಾನಯಾನ ಸಂಸ್ಥೆಗಳೊಂದಿಗೆ ಶೀಘ್ರ ಸಭೆ ಕರೆದು ವಿಮಾನ ಯಾನ ಸೇವೆ ಪುನಾರಂಭಿಸಲು ಕ್ರಮ ವಹಿಸುವಂತೆ ತಮ್ಮನ್ನು ಕೋರುತ್ತೇನೆ ಎಂದು ಪತ್ರದಲ್ಲಿ ಹೇಳಿದ್ದಾರೆ.
ಬೀದರ್ ನಗರಕ್ಕೆ ನಾಗರಿಕ ವಿಮಾನಯಾನ ಸೇವೆ ಪುನಾರಂಭಿಸುವ ನಿಟ್ಟಿನಲ್ಲಿ ವಿಮಾನಯಾನ ಸಂಸ್ಥೆಗಳೊಂದಿಗೆ ಸಭೆ ನಡೆಸಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಮೂಲಸೌಕರ್ಯ ಅಭಿವೃದ್ಧಿ ಸಚಿವರಾದ M. B. Patil ಅವರಿಗೆ ಪತ್ರ ಬರೆದಿದ್ದೇನೆ ಎಂದು ತಾವು ಬರೆದಿರುವ ಪತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
ಬೀದರ್ ಜಿಲ್ಲಾ ಕೇಂದ್ರಕ್ಕೆ ಉಡಾನ್ ಯೋಜನೆಯಡಿಯಲ್ಲಿ ನಾಗರಿಕ ವಿಮಾನಯಾನ ಸೇವೆ ಆರಂಭಿಸಿದ್ದರಿಂದ ಇಲ್ಲಿನ ಉದ್ಯಮಿಗಳಿಗೆ, ವಿದ್ಯಾರ್ಥಿಗಳಿಗೆ, ಸಂದರ್ಶನಕ್ಕೆ ಹೋಗುವ ಅಭ್ಯರ್ಥಿಗಳಿಗೆ, ಪ್ರವಾಸಿಗರಿಗೆ, ನಾಗರಿಕರಿಗೆ ತುಂಬಾ ಅನುಕೂಲವಾಗಿತ್ತು ಆದರೆ ಕಳೆದ 6 ತಿಂಗಳಿನಿಂದ ಕೇಂದ್ರ ಸರ್ಕಾರದಿಂದ ಸಬ್ಸಿಡಿ ಬಿಡುಗಡೆಯಾಗಿಲ್ಲ ಎಂಬ ಕಾರಣಕ್ಕೆ ನಾಗರಿಕ ವಿಮಾನಯಾನ ರದ್ದು ಮಾಡಲಾಗಿದ್ದು, ಈಗ ವಿಮಾನ ಯಾನ ಸೇವೆ ಸ್ಥಗಿತಗೊಂಡಿರುವುದರಿಂದ ಅನಾನುಕೂಲವಾಗಿದೆ ಎಂದಿದ್ದಾರೆ.
ಈ ಹಿಂದೆ ವಿಮಾನಯಾನ ಸೇವೆ ನೀಡುತ್ತಿದ್ದ ಸ್ಟಾರ್ ಏರ್ ನೊಂದಿಗೆ ನಾನು ಮಾತನಾಡಿದ್ದು, ಸಬ್ಸಿಡಿ ಕೊಟ್ಟರೆ ನಾಗರಿಕ ವಿಮಾನಯಾನ ಸೇವೆ ಪುನಾರಂಭ ಮಾಡುವುದಾಗಿ ತಿಳಿಸಿದ್ದಾರೆ, ಈ ಹಿನ್ನೆಲೆಯಲ್ಲಿ ವಿಮಾನಯಾನ ಸಂಸ್ಥೆಗಳೊಂದಿಗೆ ಶೀಘ್ರ ಸಭೆ ಕರೆದು ವಿಮಾನ ಯಾನ ಸೇವೆ ಪುನಾರಂಭಿಸಲು ಕ್ರಮ ವಹಿಸುವಂತೆ ಕೋರುತ್ತೇನೆ ಎಂದಿದ್ದಾರೆ.




