ಪುನೀತ್ ರಾಜ್ ಕುಮಾರ್ ಅಸ್ತಂಗತ: ಅಂತಿಮ ದರ್ಶನ ಪಡೆದ ಗಣ್ಯರು

4 years ago

ಬೆಂಗಳೂರು: 29ರಂದು ಹೃದಯಾಘಾತದಿಂದ ನಿಧನರಾದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಅಂತ್ಯಕ್ರಿಯೆ ಕಂಠೀರವ ಸ್ಟುಡಿಯೋದಲ್ಲಿ ಮುಂಜಾನೆ ನೆರವೇರಿತು. ಅಂತಿಮ ವಿಧಿವಿಧಾನಗಳನ್ನು ರಾಘವೇಂದ್ರ ರಾಜ್ ಕುಮಾರ್ ಪುತ್ರ ವಿನಯ್ ರಾಜ್ ಕುಮಾರ್ ನೆರವೇರಿಸಿದರು. ಈಡಿಗ ಸಮುದಾಯದ ವಿಧಿವಿಧಾನದ ಪ್ರಕಾರ ಅಂತ್ಯಸಂಸ್ಕಾರವನ್ನು ನಡೆಸಲಾಯಿತು.

ಅಂತಿಮ ದರ್ಶನಕ್ಕೆ ಬಂದ ಅಭಿಮಾನಿಗಳಿಗೆ ಕಂಠೀರವ ಸ್ಟುಡಿಯೋದ ಸುತ್ತಮುತ್ತ ಟಿವಿ ನೇರಪ್ರಸಾರದ ವ್ಯವಸ್ಥೆ ಮಾಡಲಾಗಿತ್ತು. ಅಭಿಮಾನಿಗಳಿಗೆ ಸ್ಟುಡಿಯೋ ಪ್ರವೇಶಕ್ಕೆ ಅವಕಾಶ ನಿರ್ಬಂಧಿಸಲಾಗಿತ್ತು. ಪುನೀತ್ ಕುಟುಂಬದವರು ಮತ್ತು ಚಿತ್ರರಂಗದ ಗಣ್ಯರು ಹಾಗೂ ರಾಜಕೀಯ ನಾಯಕರಿಗೆ ಪ್ರವೇಶ ಸೀಮಿತವಾಗಿತ್ತು. ಈ ಹಿನ್ನೆಲೆಯಲ್ಲಿ ಅಂತ್ಯಕ್ರಿಯೆ ಯಾವುದೇ ವಿಘ್ನವಿಲ್ಲದೆ ನೆರವೇರಿತು.

ಈ ವೇಳೆ ಪುನೀತ್ ರಾಜ್‌ಕುಮಾರ್ ಕುಟುಂಬದವರು, ಚಿತ್ರೋದ್ಯಮದ ಪ್ರಮುಖರು, ರವಿಚಂದ್ರನ್, ಸುದೀಪ್, ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂಗಳಾದ ಬಿ.ಎಸ್.ಯಡಿಯೂರಪ್ಪ, ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಸಚಿವರು ಸೇರಿದಂತೆ ಹಲವು ರಾಜಕೀಯ ನಾಯಕರು, ಅನೇಕ ಗಣ್ಯರು ಪಾರ್ಥೀವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದರು.

Leave a Reply