ಕರ್ನಾಟಕ ರಾಜ್ಯದ 28 ಸಂಸದರು ಲೋಕಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸುವ ಸಂದರ್ಭದಲ್ಲಿ ಕನ್ನಡದಲ್ಲಿ ಪ್ರಮಾಣ ವಚನವನ್ನು ಸ್ವೀಕರಿಸಿ ಒಗ್ಗಟ್ಟನ್ನು ಪ್ರದರ್ಶಿಸುವುದರ ಜೊತೆಗೆ ಕನ್ನಡಿಗರ ಸಾರ್ವಭೌಮತ್ವವನ್ನು ಎತ್ತಿ ಹಿಡಿಯಿರಿ.
- ಪ್ರೊ. ಎಸ್. ಬಿಳಿಗಿರಿ ವಾಸನ್ ಅವರಿಗೆ ಅಭಿನಂದನಾ ಸಮಾರಂಭ
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
ಲೋಕಸಭೆಯಲ್ಲಿ ಪ್ರಥಮ ಬಾರಿಗೆ ಕನ್ನಡದಲ್ಲಿ 1967 ರಲ್ಲಿ ಜೆ ಎಚ್ ಪಟೇಲ್ ಅವರು ನಮ್ಮ ನಾಡಿನ ಭಾಷೆಯಲ್ಲಿ ಮಾತನಾಡಿ ಭಾರತ ದೇಶಕ್ಕೆ ಕನ್ನಡದ ಹಿರಿಮೆಯನ್ನು ಸಾರಿದರು. ಈಗ ಇಂತಹದೇ ಒಂದು ಅವಕಾಶ ನಮ್ಮ ಕನ್ನಡ ನಾಡಿನ ಲೋಕಸಭಾ ಸದಸ್ಯರಿಗೆ ಒದಗಿ ಬಂದಿದೆ. ಆದುದರಿಂದ ಎಲ್ಲಾ 28 ಲೋಕಸಭಾ ಸದಸ್ಯರು ಕನ್ನಡದಲ್ಲಿ ಪ್ರಮಾಣವಚವನ್ನು ಸ್ವೀಕರಿಸಿ ಇಡೀ ದೇಶಕ್ಕೆ ಮಾದರಿಯಾಗಿ ನಿಲ್ಲಬೇಕೆಂದು ಸಮಸ್ತ ಕನ್ನಡಿಗರ ಪರವಾಗಿ ನಿಮ್ಮಲ್ಲಿ ಕೋರಿಕೊಳ್ಳುತ್ತೇವೆ.
ಕರ್ನಾಟಕ ರಾಜ್ಯದಲ್ಲಿರುವ ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದ ಅಧ್ಯಕ್ಷರು ತಮ್ಮ ಪಕ್ಷದ ಸದಸ್ಯರಿಗೆ ಕನ್ನಡದಲ್ಲಿ ಪ್ರಮಾಣವಚನ ಸ್ವೀಕರಿಸುವಂತೆ ತಿಳಿಸಬೇಕೆಂದು ಈ ಮೂಲಕ ಪಕ್ಷದ ಅಧ್ಯಕ್ಷರುಗಳಲ್ಲಿಯೂ ಸಹ ಮನವಿ ಮಾಡುತ್ತೇವೆ.
ಪ್ರಪಂಚದ ಅತ್ಯಂತ ಹೆಚ್ಚು ಜನರು ಮಾತನಾಡುವ ಕೆಲವೇ ಕೆಲವು ಭಾಷೆಗಳಲ್ಲಿ ನಮ್ಮ ಕನ್ನಡವೂ ಒಂದಾಗಿರುವುದರಿಂದ ಲೋಕಸಭಾ ಸದಸ್ಯರು ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸುವುದರ ಮೂಲಕ ಏಳು ಕೋಟಿ ಕನ್ನಡಿಗರ ಧ್ವನಿಯಾಗಿ ಸಂಭ್ರಮಿಸಬೇಕೆಂದು ಮತ್ತೊಮ್ಮೆ ಕೋರುತ್ತೇವೆ.
- ಕೆ ಎಸ್ ನಾಗರಾಜ್, ಬೆಂಗಳೂರು




