ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೆಡಿಎಸ್ ಎಂಎಲ್ ಸಿ ಸೂರಜ್ ರೇವಣ್ಣ ಬಂಧನ

2 years ago

ಹಾಸನ: ಮಾಜಿ ಸಚಿವ ಎಚ್.ಡಿ. ರೇವಣ್ಣ ಪುತ್ರ, ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರನ್ನು ಲೈಂಗಿಕ ಹಗರಣ ಪ್ರಕರಣದಲ್ಲಿ ಹಾಸನ ಪೊಲೀಸರು ಬಂಧಿಸಿದ್ದಾರೆ. ಜೆಡಿಎಸ್ ಕಾರ್ಯಕರ್ತರೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಇವರ ವಿರುದ್ಧ ಕೇಳಿಬಂದಿತ್ತು.

ಹಾಸನ ಪೊಲೀಸರು ಶನಿವಾರ ತಡರಾತ್ರಿ ಹಾಸನದಲ್ಲಿ ಲೈಂಗಿಕ ಕಿರುಕುಳ ಪ್ರಕರಣ ದಾಖಲಿಸಿದ ನಂತರ ಸೂರಜ್ ರೇವಣ್ಣ ಅವರನ್ನು ಬಂಧಿಸಿದ್ದಾರೆ. ಹೊಳೆನರಸೀಪುರ ತಾಲೂಕಿನ ಗನ್ನಿಕಡದಲ್ಲಿರುವ ತಮ್ಮ ತೋಟದ ಮನೆಯಲ್ಲಿ ಶಾಸಕರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಜೆಡಿಎಸ್ ಪಕ್ಷದ ಕಾರ್ಯಕರ್ತ ಎಂದು ಗುರುತಿಸಿಕೊಂಡಿರುವ ಅರಕಲಗೂಡು ತಾಲೂಕಿನ 27 ವರ್ಷದ ಯುವಕ, ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಜೂನ್ 11ರ ಶನಿವಾರ ದೂರು ದಾಖಲಿಸಿದ್ದರು.

ದೂರಿನ ನಂತರ, ಪೊಲೀಸರು ಹಾಸನದ ಸಿಇಎನ್ ಪೊಲೀಸ್ ಠಾಣೆಗೆ ವಿಚಾರಣೆಗೆ ಕರೆತಂದರು. ರಾತ್ರಿ ಗಂಟೆಗಟ್ಟಲೆ ವಿಚಾರಣೆ ನಡೆಸಲಾಯಿತು. ಶಾಸಕರನ್ನು ಬಂಧಿಸಲಾಗಿದ್ದು, ಉಳಿದ ಪ್ರಕ್ರಿಯೆಗಳು ನಡೆಯಲಿದೆ ಎಂದು ಜಿಲ್ಲೆಯ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಸೂರಜ್ ರೇವಣ್ಣ, ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅವರು ಹಾಸನ ಜಿಲ್ಲೆಯ ಸ್ಥಳೀಯ ಸಂಸ್ಥೆಗಳಿಂದ 2022ರಲ್ಲಿ ವಿಧಾನ ಪರಿಷತ್ತಿಗೆ ಆಯ್ಕೆಯಾಗಿದ್ದರು. ಇವರು ವ್ಯಕ್ತಿಯೊಬ್ಬನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದು, ಕೊಲೆ ಬೆದರಿಕೆ ಹಾಕಿದ್ದಾರೆ. ಹೊಳೆನರಸೀಪುರ ಗ್ರಾಮಾಂತರ ಪೊಲೀಸರು ಸೂರಜ್ ರೇವಣ್ಣ ಮತ್ತು ಅವರ ಸಹಚರ ಶಿವಕುಮಾರ್ ವಿರುದ್ಧ ಸೆಕ್ಷನ್ 377 (ಅಸ್ವಾಭಾವಿಕ ಅಪರಾಧಗಳು), 342 (ಅಕ್ರಮ ಬಂಧನ), ಮತ್ತು 506 (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಪ್ರಕರಣ ದಾಖಲು ಮಾಡಿದ್ದಾರೆ.

Leave a Reply