ಬೆಂಗಳೂರು: ಹಸಿರು ಜಾಗೃತಿ ಮಾಸದ ಅಂಗವಾಗಿ ಕಳೆದ ಒಂದು ತಿಂಗಳಿನಿಂದ ಬ್ಯಾಟರಾಯನಪುರ ಕ್ಷೇತ್ರದ ಎಲ್ಲಾ ಕೆರೆ ಪ್ರದೇಶಗಳಲ್ಲಿ ನೂರಾರು ಸಸಿಗಳನ್ನು ನೆಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈತೇಗೌಡ ಮಾಹಿತಿ ನೀಡಿದ್ದಾರೆ.
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
- ಜನಸಹಭಾಗಿತ್ವದೊಂದಿಗೆ ಸ್ವಚ್ಛತಾ ಅಭಿಯಾನಕ್ಕೆ ಸಜ್ಜು
- UPI ಡಿಜಿಟಲ್ ಮೇಲಿನ ಹೆಚ್ಚುವರಿ ಶುಲ್ಕ ಪ್ರಸ್ತಾವನೆ ಹಿಂಪಡೆಯಬೇಕು
- ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ: ಪೌರ ಕಾರ್ಮಿಕರಿಗೆ ಸನ್ಮಾನ
ಒಟ್ಟಾರೆ 50,000 ಸಸಿಗಳನ್ನು ನೆಡುವ ಗುರಿ ಹೊಂದಲಾಗಿದ್ದು, ಇಂದು ವೆಂಕಟೇಶಪುರ ಕೆರೆ ಪ್ರದೇಶದಲ್ಲಿ ನೆರೆದಿದ್ದ ನೂರಾರು ಸಂಖ್ಯೆಯ ಸಾರ್ವಜನಿಕರ ಮಕ್ಕಳ ಸಹಾಯದಿಂದ ಸಸಿ ನೆಡಲಾಯಿತು ಎಂದಿದ್ದಾರೆ.
ಪರಿಸರ ಹಾಗೂ ಜೈವಿಕ ಸಮತೋಲನದ ಬಗ್ಗೆ ಮಕ್ಕಳಲ್ಲಿ ಜಾಗೃತಿ ಮೂಡಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದ್ದು ಹೆಚ್ಚಿನ ಸಂಖ್ಯೆಯ ಮಕ್ಕಳು ಭಾಗವಹಿಸಿದ್ದು ಸಂತೋಷದ ವಿಷಯವಾಗಿದೆ ಎಂದಿದ್ದಾರೆ.
ಇದೇ ಸಂದರ್ಭದಲ್ಲಿ ಕೆರೆ ಅಭಿವೃದ್ಧಿ ಕಾರ್ಯದ ಬಗ್ಗೆಯೂ ಸಚಿವ ಕೃಷ್ಣ ಬೈರೇಗೌಡ ಅವರು ಅಧಿಕಾರಿಗಳ ಬಳಿ ಸ್ಥಳದಲ್ಲೇ ಮಾಹಿತಿ ಪಡೆದರು.











