ಸರ್ಕಾರಿ ಭೂಮಿ ಬೀಟ್ ಸಿಸ್ಟಂಗೆ ಒತ್ತು
ಕಲಬುರಗಿ: ತಹಶೀಲ್ದಾರರು ಅವರ ಸ್ಥಾನದ ಜವಾಬ್ದಾರಿ ಅರಿತು ಕೆಲಸ ಮಾಡಬೇಕು. ತಹಶೀಲ್ದಾರರು ತಾಲೂಕು ಮಟ್ಟದ ದಂಡಾಧಿಕಾರಿಗಳೂ ಆಗಿದ್ದು, ಸರ್ಕಾರಿ ಜಮೀನನ್ನು ಉಳಿಸುವ ನಿಟ್ಟಿನಲ್ಲಿ “ಬೀಟ್ ಸಿಸ್ಟಂ” ಅನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡರು ಖಡಕ್ ಸೂಚನೆ ನೀಡಿದರು.
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
- ಜನಸಹಭಾಗಿತ್ವದೊಂದಿಗೆ ಸ್ವಚ್ಛತಾ ಅಭಿಯಾನಕ್ಕೆ ಸಜ್ಜು
- UPI ಡಿಜಿಟಲ್ ಮೇಲಿನ ಹೆಚ್ಚುವರಿ ಶುಲ್ಕ ಪ್ರಸ್ತಾವನೆ ಹಿಂಪಡೆಯಬೇಕು
- ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ: ಪೌರ ಕಾರ್ಮಿಕರಿಗೆ ಸನ್ಮಾನ
ಕಲಬುರಗಿ ಜಿಲ್ಲಾಡಳಿತ ಭವನದಲ್ಲಿ ಸೋಮವಾರ ನಡೆದ ಕಲಬುರಗಿ ವಿಭಾಗದ ಕಂದಾಯ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಸರ್ಕಾರಿ ಜಮೀನುಗಳನ್ನು ಉಳಿಸಬೇಕು ಹಾಗೂ ಒತ್ತುವರಿಯನ್ನು ತೆರವುಗೊಳಿಸಬೇಕು ಎಂದು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರೂ ಖಡಕ್ ಸೂಚನೆ ನೀಡಿದ್ದಾರೆ ಎಂದರು.
ಇದೇ ಕಾರಣಕ್ಕೆ “ಬೀಟ್ ಸಿಸ್ಟಂ ಆ್ಯಪ್”ಅನ್ನು ಅಭಿವೃದ್ಧಿಪಡಿಸಲಾಯಿತು. ಈ ಆ್ಯಪ್ ಮೂಲಕ ಈಗಾಗಲೇ ಶೇ.90 ರಷ್ಟು ಸರ್ಕಾರಿ ಜಮೀನನ್ನು ಗುರುತಿಸಲಾಗಿದೆ. ಶೀಘ್ರ ಶೇ.100 ರಷ್ಟು ಜಮೀನನ್ನೂ ಗುರುತಿಸಬೇಕು. ತಹಶೀಲ್ದಾರರೇ ಮುಂದೆ ನಿಂತು ಒತ್ತುವರಿಯನ್ನು ತೆರವುಗೊಳಿಸುವ ಕೆಲಸ ಶುರು ಮಾಡಬೇಕು ಎಂದರು.
ಅಲ್ಲದೆ, ಹಲವು ಕಡೆಗಳಲ್ಲಿ ಕೆರೆ ಮತ್ತು ಸ್ಮಶಾನ ಜಾಗಗಳನ್ನೇ ಒತ್ತುವರಿ ಮಾಡಲಾಗಿದೆ. ಇಂತಹ ಎಲ್ಲಾ ಜಮೀನಿನಲ್ಲೂ ಒತ್ತುವರಿ ತೆರವುಗೊಳಿಸಬೇಕು, ಅಲ್ಲದೆ, ಪ್ರತಿ ಮೂರು ತಿಂಗಳಿಗೊಮ್ಮೆ ಗ್ರಾಮ ಆಡಳಿತ ಅಧಿಕಾರಿಗಳು ಸರ್ಕಾರಿ ಜಮೀನಿಗೆ ಬೀಟ್ ಹಾಕಬೇಕು. ಆ ಮೂಲಕ ಸರ್ಕಾರಿ ಆಸ್ತಿಯನ್ನು ರಕ್ಷಿಸಬೇಕು ಎಂದರು.




