ಶಿವಮೊಗ್ಗ: ಲಷ್ಕರ್ ಮೊಹಲ್ಲಾದ ಅಲ್ಪಸಂಖ್ಯಾತರ ಮೌಲಾನಾ ಆಜಾದ್ ಮಾದರಿ ಶಾಲೆಯು ಒಂದು ವರ್ಷದ ಹಿಂದೆ ಸೋಮಿನಕೊಪ್ಪದ ಸ್ವಂತ ಕಟ್ಟಡಕ್ಕೆ ಸ್ಥಳಾಂತರಗೊಂಡು ಕಾರ್ಯ ನಿರ್ವಹಿಸುತ್ತಿದ್ದು ಅಲ್ಲಿಯ ಮಕ್ಕಳಿಗೆ ಮಧ್ಯಾಹ್ನದ ಬಿಸಿ ಊಟದ ವ್ಯವಸ್ಥೆ ಇರುವುದಿಲ್ಲ. ಈ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ನೀಡುವಂತೆ ಜೂ. 28 ರಂದು ನೆಡೆದ ಜನ ಸ್ಪಂದನ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಿಗೆ ಪೋಷಕರು ಮನವಿ ಮಾಡಿದ್ದರು.
ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಜಿಲ್ಲಾಧಿಕಾರಿ ಮತ್ತು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳೊಂದಿಗೆ ಮಾತನಾಡಿ, ಮೌಲಾನಾ ಆಜಾದ್ ಮಾದರಿ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ಕಲ್ಪಿಸುವಂತೆ ಸೂಚಿಸಿದ್ದರು.
- ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣವೇ ಪದಚ್ಯುತಗೊಳಿಸಿ: ಸಿದ್ದರಾಮಯ್ಯ
- ಸತತ 5 ದಿನ ಬ್ಯಾಂಕ್ಗಳಿಗೆ ಬೀಗ!: ಏನಿರುತ್ತದೆ, ಏನಿಲ್ಲ? ಕಂಪ್ಲೀಟ್ ಡೀಟೈಲ್ಸ್!
- 814 ಉಪನ್ಯಾಸಕರ ನೇಮಕಾತಿಯಲ್ಲಿ ಉರ್ದುಗೆ ಸ್ಥಾನ ಎಲ್ಲಿದೆ?
- ಸಾಲ ಮನ್ನಾ ಮಾಡಿ ರೈತರ ಹಿತ ಕಾಪಾಡಿದ್ದ ಡಾ.ಮನಮೋಹನ್ ಸಿಂಗ್
- ರಾಜ್ಯದ ಅಭಿವೃದ್ಧಿಗೆ ಆರ್.ಅಶೋಕ್ ಅಡ್ಡಗಾಲು: ಕೆಪಿಸಿಸಿ
ಅದರಂತೆ ಜೂ.29 ರಿಂದ ಹತ್ತಿರದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಉರ್ದು ಶಾಲೆಯಿಂದ ಮಕ್ಕಳಿಗೆ ಮಧ್ಯಾಹ್ನ ಬಿಸಿಯೂಟದ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ.




