ದಾವಣಗೆರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ ಹಾಗೂ ರುಡ್ಸೆಟ್ ಸಂಸ್ಥೆಯ ವತಿಯಿಂದ ದ್ವಿಚಕ್ರ ವಾಹನ ರಿಪೇರಿ ಮತ್ತು ಸೇವೆ ಕುರಿತ 30 ದಿನಗಳ ಉಚಿತ ತರಬೇತಿಗಾಗಿ ಆಗಸ್ಟ್ 21 ರಿಂದ ಗ್ರಾಮೀಣ ನಿರುದ್ಯೋಗಿ ಯುವಕರಿಂದ ಅರ್ಜಿ ಆಹ್ವಾನಿಸಲಾಗಿದೆ.
- ಮೈಸೂರು ದಸರಾ: ಕನ್ನಡ ಪುಸ್ತಕಗಳ ರಿಯಾಯಿತಿ ಮಾರಾಟ
- ಪೌರಕಾರ್ಮಿಕರ ದಿನಾಚರಣೆ ಪ್ರಯುಕ್ತ ಕಸ ಸಂಗ್ರಹಣೆ ಇಲ್ಲ
- ಸರಳ, ವೇಗ, ಪಾರದರ್ಶಕ, ಜನಸ್ನೇಹಿ ಆಸ್ತಿ ದಾಖಲೆ ವ್ಯವಸ್ಥೆ ಇ-ಆಸ್ತಿ 2.0: ಕೃಷ್ಣ ಬೈರೇಗೌಡ
- ರೈತರಿಗೆ ನಿರಂತರ 6 ತಾಸು ಸಮರ್ಪಕ ವಿದ್ಯುತ್ ಕುಡಿಯುವ ನೀರು ಪೂರೈಕೆಗೆ ಆದ್ಯತೆ
- ಕೆಟಿವಿಎ ಗೃಹ ಪತ್ರಿಕೆ ಟಿವಿ – ಠೀವಿ ಪುನರಾರಂಭ
18 ರಿಂದ 45 ವರ್ಷ ವಯೋಮಾನ ಮತ್ತು ಕನ್ನಡ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್ ಕಾರ್ಡ್ ಅಥವಾ ಜಾಬ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ನ್ನು ಕಡ್ಡಾಯವಾಗಿ ಹೊಂದಿರಬೇಕು.
ತರಬೇತಿ ವಸತಿಯುತವಾಗಿದ್ದು, ಈ ಅವಧಿಯಲ್ಲಿ ಉಚಿತ ಊಟ, ವಸತಿ ನೀಡಲಾಗುವುದು. ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು. ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನವಾಗಿದೆ.
ಹೆಚ್ಚಿನ ಮಾಹಿತಿಗಾಗಿ ರುಡ್ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಥವಾ ಮೊಬೈಲ್ ಸಂಖ್ಯೆ: 9740982585, 9380162042 ಅನ್ನು ಸಂಪರ್ಕಿಸಬಹುದು.




