ರಾಮನಗರದ ಎಸ್.ಓ.ಜಿ.ಕಾಲೋನಿ ಮನೆಯಲ್ಲಿ ನಡೆದಿದ್ದ ಘಟನೆ
ದಾವಣಗೆರೆ: ದಾವಣಗೆರೆ ರಾಮನಗರದ ಎಸ್ಒಜಿ ಕಾಲೋನಿ ಮನೆಯಲ್ಲಿ ಮಂಗಳವಾರ ಅಡುಗೆ ಅನಿಲದ ಸಿಲಿಂಡರ್ ಸ್ಫೋಟದಿಂದ ಐವರು ಗಂಭೀರವಾಗಿ ಗಾಯಗೊಂಡಿದ್ದು ಎಸ್.ಎಸ್.ಹೈಟೆಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಎಂ.ವಿ ಅವರು ಎಸ್.ಎಸ್.ಹೈಟೆಕ್ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಯೋಗಕ್ಷೇಮ ವಿಚಾರಿಸಿದರು.
- ನಕಲಿ ಔಷಧಿ ತಯಾರಕರು, ಮಾರಾಟಗಾರರನ್ನು ಶಿಕ್ಷಿಸಿ
- ಹೈಕಮಾಂಡ್ಗೆ ಕೊಡಲು ಹಣವಿದೆ, ರೈತರಿಗೆ ಕೊಡಲು ಹಣವಿಲ್ಲ: ಆರ್.ಅಶೋಕ
- ಯಶವಂತರಾಯಗೌಡ ಪಾಟೀಲ್ ರಾಜೀನಾಮೆ ಕುರಿತು ಡಿ ಕೆ ಶಿವಕುಮಾರ್ ಹೇಳಿದ್ದೇನು?
- ಬರ ಘೋಷಣೆಗಿರುವ ನಿಯಮಗಳನ್ನು ಕೇಂದ್ರ ಸರ್ಕಾರ ಸಡಿಲಿಸಲಿ: ಡಾ. ಜಿ. ಪರಮೇಶ್ವರ್
- ಧನುಷ್ ನಟನೆಯ ‘OM’ ಬಿಡುಗಡೆ ದಿನಾಂಕ ಮುಂದೂಡಿಕೆ!
ಒಟ್ಟು 5 ಜನ ಚಿಕಿತ್ಸೆ ಪಡೆಯುತ್ತಿದ್ದು ವಿಶೇಷ ತಜ್ಞ ವೈದ್ಯರು ನಿಗಾವಹಿಸಿದ್ದಾರೆ. ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಎಲ್ಲಾ ಗಾಯಾಳುಗಳಿಗೆ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಡಿ ಎಲ್ಲಾ ಚಿಕಿತ್ಸೆ ನೀಡಲು ತಿಳಿಸಿದರು.
ಒಟ್ಟು ಐದು ಜನರಲ್ಲಿ ಲಲಿತಮ್ಮ ಇವರಿಗೆ ಹೆಚ್ಚಿನ ಗಾಯವಾಗಿದೆ, ಸೌಭಾಗ್ಯ, ಪಾರ್ವತಮ್ಮ ಇವರಿಗೆ ಶೇ 50 ಕ್ಕಿಂತ ಹೆಚ್ಚು ಗಾಯವಾಗಿದೆ. ಉಳಿದ ಇಬ್ಬರಿಗೆ ಶೇ 50 ಕ್ಕಿಂತ ಕಡಿಮೆ ಇದೆ. ಗಾಯವು ನಂಜಾಗದಂತೆ ನೋಡಿಕೊಂಡು ಅತ್ಯುತ್ತಮ ಚಿಕಿತ್ಸೆ ನೀಡುವ ಮೂಲಕ ಗುಣಮುಖರಾಗುವಂತೆ ನೋಡಿಕೊಳ್ಳಲು ತಿಳಿಸಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಹಾಗೂ ಜಿಲ್ಲಾ ಸರ್ಜನ್ ಅವರು ಗಾಯಾಳುಗಳ ನಿಗಾವಹಿಸಲು ತಿಳಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಷಣ್ಮುಖಪ್ಪ, ಚಿಗಟೇರಿ ಆಸ್ಪತ್ರೆ ಸರ್ಜನ್ ಡಾ. ನಾಗೇಂದ್ರಪ್ಪ ಹಾಗೂ ಎಸ್.ಎಸ್.ಹೈಟೆಕ್ ಆಸ್ಪತ್ರೆ ವೈದ್ಯರು ಉಪಸ್ಥಿತರಿದ್ದರು.




