ಮೈಸೂರು: ರಾಜ್ಯದಲ್ಲಿ 1,000 ಗ್ರಾಮ ಆಡಳಿತಾಧಿಕಾರಿಗಳು, 750 ಸರ್ಕಾರಿ ಸರ್ವೇಯರ್ ಭರ್ತಿ ಪ್ರಕಿಯೆ ನಡೆದಿದೆ. ಇದರ ಜೊತೆಗೆ 34 ಎ.ಡಿ.ಎಲ್.ಆರ್ ನೇಮಕಾತಿ ಸಹ ನಡೆದಿದೆ. ಇದರಿಂದ ಸರ್ವೇಯರ್ ಇಲಾಖೆಗೆ ಬಲ ಬರಲಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು.
- ದೇಶದ ರಾಜ್ಯಗಳಲ್ಲಿ ಕೊನೆಯ ಬಾರಿ ಕಾಂಗ್ರೆಸ್ ಸಿಎಂ ಇದ್ದದ್ದು ಯಾವಾಗ?
- ನಮ್ಮ ತಲೆಮಾರಿನ ರಾಜಕಾರಣಿಗಳು, ಭವಿಷ್ಯದ ಯುವ ನಾಯಕರಿಗೆ ಸಿದ್ದರಾಮಯ್ಯ ಸ್ಫೂರ್ತಿ: ಪ್ರಿಯಾಂಕ್ ಖರ್ಗೆ
- ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಸಿದ್ದರಾಮಯ್ಯ ಹೇಳಿದ್ದೇನು?
- ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ಯಾರು, ಏನೆಂದರು?
- ಹಣಕಾಸು ಮಂತ್ರಿಗಳಾಗಿ ಸಿದ್ದರಾಮಯ್ಯ ಸಾಧಿಸಿದ ಆರ್ಥಿಕ ಶಿಸ್ತು ಒಂದು ಪಠ್ಯದಂತಿದೆ: ಬಿ ಶ್ರೀಪಾದ ಭಟ್
ಮೈಸೂರಿನ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ಮೈಸೂರು ವಿಭಾಗದ ಕಂದಾಯ ಇಲಾಖೆ ಪ್ರಗತಿ ಪರಿಶೀಲನಾ ಸಭೆಯ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಸ್ತುತ ಇರುವ 22 ಲಕ್ಷ ಬಹು ಮಾಲೀಕತ್ವದ ಆರ್.ಟಿ.ಸಿ. ಗಳನ್ನು ಅವರವರಿಗೆ ಪ್ರತ್ಯೇಕವಾಗಿ ಪೋಡಿ ಮಾಡಿ ಆರ್.ಟಿ.ಸಿ. ಮಾಡಿಸಿ ಕೊಡಬೇಕಾಗಿದೆ. ಇದಕ್ಕಾಗಿ ರೋಡ್ ಮ್ಯಾಪ್ ಸಿದ್ಧಗೊಳಿಸಲಾಗುತ್ತಿದೆ ಎಂದರು.




