ಬಳ್ಳಾರಿ: ಕಾರ್ಮಿಕರ ಭವಿಷ್ಯ ನಿಧಿ ಸಂಸ್ಥೆಯ ಬಳ್ಳಾರಿ ಪ್ರಾದೇಶಿಕ ಕಚೇರಿ ವತಿಯಿಂದ ಪಿಂಚಣಿದಾರರ ಕುಂದು ಕೊರತೆ ಆಲಿಸಿ, ಪರಿಹರಿಸಲು ಜು.15 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 01 ಗಂಟೆಯವರೆಗೆ ನಗರದ ಪ್ರಾದೇಶಿಕ ಕಚೇರಿಯಲ್ಲಿ ಪಿಂಚಣಿ ಅದಾಲತ್ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಜಿಲ್ಲಾ ಪ್ರಾದೇಶಿಕ ಕಚೇರಿಯ ಪ್ರಾದೇಶಿಕ ಭವಿಷ್ಯ ನಿಧಿ ಆಯುಕ್ತ ಕೆ.ವೆಂಕಟ ಸುಬ್ಬಯ್ಯ ತಿಳಿಸಿದ್ದಾರೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಬಳ್ಳಾರಿ, ವಿಜಯನಗರ, ಕೊಪ್ಪಳ, ಚಿತ್ರದುರ್ಗ ಜಿಲ್ಲೆಗಳ ಪಿಂಚಣಿದಾರರು ತಮ್ಮ ಕುಂದುಕೊರತೆಗಳಿದ್ದಲ್ಲಿ ಬಳ್ಳಾರಿ ಪ್ರಾದೇಶಿಕ ಕಚೇರಿಯ ಸಾರ್ವಜನಿಕ ಸಂಪರ್ಕ ಅಧಿಕಾರಿಗೆ ಪತ್ರ ಅಥವಾ ಇ-ಮೇಲ್ ಮೂಲಕ ಪಿ.ಪಿ.ಒ ಸಂಖ್ಯೆ, ವಿಳಾಸ, ದೂರವಾಣಿ, ಮೊಬೈಲ್ ಸಂಖ್ಯೆ ಮತ್ತು ಕುಂದು ಕೊರತೆಯ ಸ್ವರೂಪವ ಹಾಗೂ ಇತ್ಯಾದಿಗಳನ್ನು ಜು.10 ರೊಳಗಾಗಿ ತಿಳಿಸಬಹುದು. ಪತ್ರ ಲಕೋಟೆ ಮೇಲೆ ಪಿಂಚಣಿ ಅದಾಲತ್ ಎಂದು ಬರೆಯಬೇಕು.
ಹೆಚ್ಚಿನ ಮಾಹಿತಿಗಾಗಿ ದೂ.08392-268943 ಗೆ ಸಂಪರ್ಕಿಸಬಹುದು.




