ಶಿವಮೊಗ್ಗ: 2024-25ನೇ ಶೈಕ್ಷಣಿಕ ಸಾಲಿಗೆ ಶಿವಮೊಗ್ಗ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಕವಶಿಸಸಂ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ/ ಅಟಲ್ ಬಿಹಾರಿ ಪಾಜಪೇಯಿ/ ಕಿತ್ತೂರು ರಾಣಿ ಚೆನ್ನಮ್ಮ / ಡಾ. ಬಿ.ಆರ್. ಅಂಬೇಡ್ಕರ್/ ಇಂದಿರಾ ಗಾಂಧಿ/ ನಾರಾಯಣ ಗುರು ವಸತಿ ಶಾಲೆಗಳಲ್ಲಿ 6ನೇ ತರಗತಿಗೆ ಕೆಲವು ವಿಶೇಷ ವರ್ಗದಡಿ ಪ್ರವೇಶಾವಕಾಶವನ್ನು ಕಲ್ಪಿಸಿ ಅರ್ಹ ವಿದ್ಯಾರ್ಥಿಗಳಿಂದ ಆನ್ಲೈನ್ ಅರ್ಜಿ ಆಹ್ವಾನಿಸಿದೆ.
- ಕನ್ನಡ ಸಿನಿಮಾ: ಮುಳುಗುತ್ತಿರುವ ಟೈಟಾನಿಕ್
- RSS ಅನ್ನು ಪ್ರಶ್ನಿಸುವ ಯೋಗ್ಯತೆಯಿದೆಯೇ?: ಆರ್. ಅಶೋಕ್
- ಎಸ್ಐಆರ್ ಎನ್ಯೂಮರೇಷನ್ ಪ್ರಕ್ರಿಯೆ ಬಗ್ಗೆ ಗೊಂದಲ ನಿವಾರಣೆ ಅಗತ್ಯ: ಅಪ್ಸರ್ ಕೊಡ್ಲಿಪೇಟೆ
- ಮಾತಾಡದೇ ನನ್ನೊಳಗೇ ಉಳಿದ ವಿಷಯಗಳು ಹೀಗಿವೆ
- ಪಂಚ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೆ ನಿಲ್ಲಿಸುವುದಿಲ್ಲ: ಸಿದ್ದರಾಮಯ್ಯ
ಸಫಾಯಿ ಕರ್ಮಚಾರಿ/ ಗುರುತಿಸಿದ ಮ್ಯಾನ್ಯುಯಲ್ ಸ್ಕ್ಯಾವೆಂಜರ್ಸ್/ ಚಿಂದಿ ಆಯುವವರು / ಸ್ಮಶಾನ ಕಾರ್ಮಿಕರ ಮಕ್ಕಳು / ಬಾಲ ಕಾರ್ಮಿಕರು/ ಜೀತ ವಿಮುಕ್ತ ಕಾರ್ಮಿಕರ ಮಕ್ಕಳು/ ಗುರುತಿಸಿರುವ ಮಾಜಿ ದೇವದಾಸಿಯರ ಮಕ್ಕಳು/ 25% ಕ್ಕಿಂತ ಹೆಚ್ಚಿನ ಅಂಗವಿಕಲತೆ ಹೊಂದಿರುವ ಮಕ್ಕಳು/ ಹೆಚ್.ಐ.ವಿ.ಗೆ ತುತ್ತಾದ ಪೋಷಕರ ಮಕ್ಕಳು/ ಒಬ್ಬ ಪೋಷಕರನ್ನು ಮಾತ್ರ ಹೊಂದಿರುವ ಮಕ್ಕಳು/ ಅನಾಥ ಮಕ್ಕಳು / ಗುರುತಿಸಿರುವ ಅಲೆಮಾರಿ/ ಅರೆ ಅಲೆಮಾರಿ/ ಸೂಕ್ಷ್ಮ- ಅತೀ ಸೂಕ್ಷ್ಮ ಸಮುದಾಯದ/ಸೈನಿಕರ ಮತ್ತು ಮಾಜಿ ಸೈನಿಕರ/ಸರ್ಕಾರಿ ಯೋಜನೆಗಳಿಂದ ಸ್ಥಳಾಂತರಗೊಂಡ ಪೋಷಕರ ಮಕ್ಕಳು / ಪ.ಜಾ./ಪ.ಪಂ.ಗಳ ಆಶ್ರಮ ವಸತಿ ಶಾಲೆಗಳಲ್ಲಿ 5ನೇ ತರಗತಿಯಲ್ಲಿ ಉತ್ತೀರ್ಣರಾದ ಮಕ್ಕಳು ಈ ಎಲ್ಲಾ ವಿಶೇಷ ವರ್ಗಗಳು ಅರ್ಜಿ ಸಲ್ಲಿಸಬಹುದು.
ಆಸಕ್ತರು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವೆಬ್ಸೈಟ್ https://cetonline.karnataka.gov.in/kreis24d/ ಲಿಂಕ್ನಲ್ಲಿ ದಿ:14/07/2024ರೊಳಗಾಗಿ ಸಲ್ಲಿಸುವಂತೆ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಸಮಾಜ ಕಲ್ಯಾಣ ಇಲಾಖೆಯ ಸಹಾಯವಾಣಿ 9482300400 ನ್ನು ಸಂಪರ್ಕಿಸಬಹುದು.




