ಖಾಸಗಿ ಉದ್ಯಮಗಳಲ್ಲಿ ಕನ್ನಡಿಗರಿಗೆ ಮೀಸಲಾತಿ: ಎಂ ಬಿ ಪಾಟೀಲ್

2 years ago

ಬೆಂಗಳೂರು: ಖಾಸಗಿ ಉದ್ಯಮಗಳಲ್ಲಿ ಕನ್ನಡಿಗರಿಗೆ ಕೆಲವು ಶ್ರೇಣಿಯ ಹುದ್ದೆಗಳನ್ನು ನೂರಕ್ಕೆ ನೂರರಷ್ಟು ಮೀಸಲಿಡಲು ನಿರ್ಧರಿಸಿರುವ ರಾಜ್ಯ ಸರ್ಕಾರ ಇದಕ್ಕಾಗಿ ಕಾನೂನು ರೂಪಿಸಿದ್ದು ಅದಕ್ಕೆ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಸಂಬಂಧ ಸರಕಾರ ವಿಧೇಯಕಕ್ಕೆ ಅನುಮೋದನೆ ನೀಡಿದೆ. ಈ ವಿಚಾರವಾಗಿ ಸದ್ಯದಲ್ಲೇ ಸಿಎಂ ಸಿದ್ದರಾಮಯ್ಯ, ಐಟಿ-ಬಿಟಿ, ಕಾನೂನು ಮತ್ತು ಕಾರ್ಮಿಕ ಸಚಿವರ ಜೊತೆ ಚರ್ಚಿಸಿ, ಗೊಂದಲಗಳಿಗೆ ತೆರೆ ಎಳೆಯಲಾಗುವುದು ಎಂದರು.

ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗ ಸಿಗಲೇಬೇಕು ಎನ್ನುವುದರಲ್ಲಿ ಎರಡು ಮಾತಿಲ್ಲ. ತಯಾರಿಕಾ ವಲಯ ಮತ್ತು ಕೈಗಾರಿಕಾ ಕ್ರಾಂತಿಯ ಉಜ್ವಲ ಅವಕಾಶಗಳನ್ನು ನಾವು ಕಳೆದುಕೊಳ್ಳುವಂತಿಲ್ಲ ಎಂದರು‌. ದು

ಸ್ಥಳೀಯರ ಹಿತಾಸಕ್ತಿಗಳನ್ನು ಕಾಪಾಡಲು ಸರಕಾರ ಬದ್ಧವಾಗಿದೆ. ಹಾಗೆಯೇ ಉದ್ಯಮ ವಲಯದವರ ಹಿತಾಸಕ್ತಿಗೂ ಧಕ್ಕೆಯಾಗದಂತೆ ನಿಗಾ ವಹಿಸಲಾಗುವುದು. ಈ ಕುರಿತು ಸಂಬಂಧಪಟ್ಟ ಎಲ್ಲರ ಜೊತೆಗೂ ಮಾತುಕತೆ ನಡೆಸಲಾಗುವುದು. ಈ ವಿಷಯದಲ್ಲಿ ಯಾವುದೇ ಆತಂಕ ಬೇಕಿಲ್ಲ ಎಂದರು.

ಕರ್ನಾಟಕ ಪುರೋಗಾಮಿ ರಾಜ್ಯವಾಗಿದೆ. ‘ಗ್ಲೋಬಲ್ ಚೈನಾ ಒನ್’ ನೀತಿಯಿಂದ ಒದಗಿ ಬಂದಿರುವ ಸದವಕಾಶವನ್ನು ನಾವು ಕಳೆದುಕೊಳ್ಳುವಂತಿಲ್ಲ. ಇದು ಶತಮಾನಕ್ಕೊಮ್ಮೆ ಒದಗಿ ಬರುವ ಅವಕಾಶ ಎಂದರು.

Leave a Reply