ಬೆಂಗಳೂರು: ಸೈಬರ್ ಅಪರಾಧಗಳನ್ನು ಪರಿಣಾಮಕಾರಿ ತಡೆಗಟ್ಟುವ ಸಲುವಾಗಿ ಸಿಇಎನ್ ಪೊಲೀಸ್ ಠಾಣೆಗಳಿಗೆ ಹೆಚ್ಚಿನ ತರಬೇತಿ ಹೊಂದಿದ ಸಿಬ್ಬಂದಿಯನ್ನು ನಿಯೋಜಿಸಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.
- ಕನ್ನಡ ಪರ ನೀತಿ ನಿರೂಪಣೆ ಪ್ರಸ್ತಾವವನ್ನು ಸರ್ಕಾರಕ್ಕೆ ಸಲ್ಲಿಸುವ ನಿಟ್ಟಿನಲ್ಲಿ ಸಿದ್ಧತೆ
- ಕನ್ನಡ, ಕನ್ನಡಿಗರ ಪರ ದುಂಡುಮೇಜಿನ ಸಭೆ
- ವ್ಯಕ್ತಿಯನ್ನು ಗುರುತಿಸಿದರೆ ಸಮಾಜವನ್ನೇ ಗುರುತಿಸಿದಂತೆ: ಡಾ. ಎ ಆರ್ ಗೋವಿಂದಸ್ವಾಮಿ
- ಸಂವಿಧಾನ ಪೀಠಿಕೆ ದೇಶದ ಆತ್ಮವಿದ್ದಂತೆ: ಆದಿತ್ಯ ಚಟರ್ಜಿ
- ಕುಸಿಯುತ್ತಿರುವ ಪ್ರಜಾಪ್ರಭುತ್ವದ ವ್ಯಾಪ್ತಿ ಮತ್ತು ದೀರ್ಘಾವಧಿ ಪ್ರಧಾನಿಯ ಸಾಧನೆಗಳು
ವಿಧಾನ ಪರಿಷತ್ ನಲ್ಲಿ ಸದಸ್ಯೆ ಉಮಾಶ್ರೀ ಅವರ ಪ್ರಶ್ನೆಗೆ ಉತ್ತರಿಸಿದ ಪರಮೇಶ್ವರ್, ಆನ್ ಲೈನ್ ವಂಚನೆ ಸೇರಿ ಸೈಬರ್ ಅಪರಾಧಗಳನ್ನು ತಡೆಗಟ್ಟಲು, ಪತ್ತೆಹಚ್ಚಲು, ಆರೋಪಿಗಳ ಬಂಧನದ ನಿಗಾ ವಹಿಸಲು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ)ಮಟ್ಟದ ಅಧಿಕಾರಿಯನ್ನು ನಿಯೋಸಲಾಗಿದೆ ಎಂದರು.
ಸಿಐಡಿ ವಿಭಾಗದಲ್ಲಿ ಸೈಬರ್ ಅಪರಾಧಗಳ ತನಿಖೆ ಸಂಶೋಧನೆ, ತರಬೇತಿಗಾಗಿ (ಸಿಸಿಐಟಿಆರ್)ಘಟಕವನ್ನು ಎಡಿಜಿಪಿ ನೇತೃತ್ವದಲ್ಲಿ ಆರಂಭಿಸಲಾಗಿದೆ. ಇದರಿಂದ ಸರ್ಕಾರಿ ಸಂಸ್ಥೆಗಳು, ನ್ಯಾಯಾಧೀಶರುಗಳಿಗೆ, ಕಾನೂನು ಅಭಿಯೋಜಕರಿಗೆ, ಪೊಲೀಸ್ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಗೆ ಸೈಬರ್ ಅಪರಾಧಗಳನ್ನು ತನಿಖೆ ಮತ್ತು ಪತ್ತೆ ಮಾಡುವ ಬಗ್ಗೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ತರಬೇತಿಯನ್ನು ನೀಡಲಾಗುತ್ತಿದೆ ಎಂದರು.
ರಾಜ್ಯದ ಪ್ರತಿ ಪೊಲೀಸ್ ಠಾಣೆಗಳಲ್ಲಿಯೂ ಸೈಬರ್ ಅಪರಾಧಗಳ ದೂರನ್ನು ಸ್ವೀಕರಿಸುವಂತೆ ಸೂಕ್ತ ಕ್ರಮ ಕೈಗೊಳ್ಳಲಾಗಿದ್ದು, ಸೈಬರ್ ಕ್ರೈಂ ಅಪರಾಧಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರಲ್ಲಿ ಮೂಡಿಸಲು ಬಹಳಷ್ಟು ಕಾರ್ಯಕ್ರಮಗಳನ್ನು ಹಮ್ಮಿಕೊಂಡು, ಎಲ್ಲಾ ವರ್ಗದ ಜನಗಳಿಗೂ ಸಾಮಾಜಿಕ ಜಾಲತಾಣ ಮತ್ತು ಎಲ್ಲಾ ಮಾಧ್ಯಮಗಳಿಂದಲೂ ಸಹ ಸಾಮಾನ್ಯ ಜನರಿಗೆ ಅನುಕೂಲವಾಗುವ ರೀತಿಯಲ್ಲಿ ಅರಿವು ಮೂಡಿಸಲಾಗುತ್ತಿದೆ ಎಂದರು.
ಸೈಬರ್ ಅಪರಾಧಗಳ ತನಿಖೆ ಕೈಪಿಡಿಯನ್ನು ರಾಜ್ಯದ ಎಲ್ಲಾ ಘಟಕಗಳಿಗೆ, ಪೊಲೀಸ್ ಠಾಣೆಗಳಿಗೆ ಮತ್ತು ಇತರ ಕಾನೂನು ಜಾರಿ ಸಂಸ್ಥೆಗಳಿಗೆ ಕಳುಹಿಸಿಕೊಡಲಾಗಿದ್ದು, ಅದರಂತೆ, ಎಲ್ಲಾ ರೀತಿಯ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದರು.
ಬ್ಯಾಂಕಿಂಗ್ ಅಪರಾಧಗಳಿಗೆ ಸಂಬಂಧಿಸಿದಂತೆ ಆರ್ ಬಿಐ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳು ಹಾಗೂ ಬ್ಯಾಂಕ್ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಬ್ಯಾಂಕಿಂಗ್ ಹಾಗೂ ಇತರ ಸೈಬರ್ ಅಪರಾಧಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಹಲವು ಪರಿಣಾಮಕಾರಿ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವ ಮೂಲಕ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಗುತ್ತಿದೆ ಎಂದರು.



