ಬೆಂಗಳೂರು: ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ ಮಂಡಲ ಬಿಜೆಪಿ ವತಿಯಿಂದ ಕೇಂದ್ರ ಜಲಶಕ್ತಿ ಮತ್ತು ರೈಲ್ವೆ ರಾಜ್ಯ ಸಚಿವ ವಿ.ಸೋಮಣ್ಣ ಅವರ ಹುಟ್ಟುಹಬ್ಬದ ಅಚರಣೆ ಮತ್ತು ಉಚಿತ ಆರೋಗ್ಯ ಶಿಬಿರ, ರಕ್ತದಾನ ಶಿಬಿರ ಮತ್ತು ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ಹಣ್ಣು,ಹಂಪಲು ವಿತರಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ವಿ.ಸೋಮಣ್ಣ ಆದಿಚುಂಚಗಿರಿ ಮಠಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ, ಶ್ರೀ ಶ್ರೀ ಸೌಮ್ಯನಾಥ ಸ್ವಾಮೀಜಿರವರಿಂದ ಆಶೀರ್ವಾದ ಪಡೆದರು. ಉಚಿತ ಆರೋಗ್ಯ ತಪಾಸಣೆ ಮತ್ತು ರಕ್ತದಾನ ಶಿಬಿರದಲ್ಲಿ ನೂರಾರು ಜನರಿಗೆ ತಜ್ಞ ವೈದ್ಯರಿಂದ ತಪಾಸಣೆ ಮಾಡಲಾಯಿತು.
ಇದೇ ಸಂದರ್ಭದಲ್ಲಿ ವಿ.ಸೋಮಣ್ಣ ಮಾತನಾಡಿ, ನನ್ನ ಜೀವನದಲ್ಲಿ ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಮತ್ತು ಶ್ರೀ ಶ್ರೀ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿರವರ ಆಶೀರ್ವಾದ, ಒಡನಾಟದಿಂದ ಕಳೆದ 45 ವರ್ಷಗಳಿಂದ ಜನಸೇವೆ ಮಾಡಲು ಸಾಧ್ಯವಾಗಿದೆ ಎಂದರು.
ಬಿನ್ನಿಪೇಟೆ, ವಿಜಯನಗರ, ಗೋವಿಂದರಾಜನಗರ ಮತ್ತು ತುಮಕೂರು ಕ್ಷೇತ್ರಗಳು ನನ್ನ ಹೃದಯದಲ್ಲಿ ಇವೆ. ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಕಡಿಮೆ ಅವಧಿಯಲ್ಲಿ ಚುನಾವಣೆ ಪ್ರಚಾರ ಮಾಡಲು ಅವಕಾಶ ಸಿಕ್ಕಿತ್ತು. ಅಲ್ಲಿನ ಜನರ ಪ್ರೀತಿ ವಿಶ್ವಾಸದಿಂದ ನನಗೆ 1ಲಕ್ಷದ 75 ಸಾವಿರ ಅಂತರದಿಂದ ಜಯಗಳಿಸಿದೆ. ಬೆಂಗಳೂರು ನಗರ ಹತ್ತಿರದಲ್ಲಿ ತುಮಕೂರು ಕ್ಷೇತ್ರ ಇದೆ. ಮಾದರಿ ಹೈಟೆಕ್ ಕ್ಷೇತ್ರವಾಗಿ ಮಾಡಲಾಗುತ್ತದೆ. ತುಮಕೂರು ಪುಣ್ಯ ಭೂಮಿ ಕ್ಷೇತ್ರವಾಗಿದೆ ಎಂದರು.
ರಾಜ್ಯದಲ್ಲಿ ರೈಲ್ವೆ ಯೋಜನೆಗಳನ್ನು ಶೀಘ್ರಗತಿಯಲ್ಲಿ ಕಾಮಗಾರಿ ಪೂರ್ಣಗೊಳಿಸಲಾಗುವುದು ಮತ್ತು ಜಲಶಕ್ತಿ ಯೋಜನೆಗಳಿಗೆ ಹೊಸ ಕಾಯಕಲ್ಪ ನೀಡಲಾಗುವುದು. ಪ್ರಧಾನಿ ನರೇಂದ್ರಮೋದಿರವರ ನೇತೃತ್ವದಲ್ಲಿ 10 ವರ್ಷದಲ್ಲಿ ವಿಶ್ವದ ಬಲಿಷ್ಠ ರಾಷ್ಟ್ರವಾಗಿ ಹೊರಹೊಮ್ಮಿದೆ ಎಂದರು.
ವಿ.ಸೋಮಣ್ಣ ಎಂದರೆ ಸಾಮಾನ್ಯ ಕಾರ್ಯಕರ್ತ. ನನ್ನನ್ನು ಗುರುತಿಸಿ ಬೆಳಸಿದ ನಾಡಿನ ಜನರು ಮತ್ತು ಬಿಜೆಪಿ ಮುಖಂಡರು, ಕಾರ್ಯಕರ್ತರಿಗೆ ಧ್ಯನವಾದಗಳು ಎಂದರು.
ಬಿಜೆಪಿ ಮುಖಂಡರಾದ ವೇಣುಗೌಡ, ಶ್ರೀಧರ್, ಡೊಡ್ಡವೀರಯ್ಯ, ರಮೇಶ್, ಮಹಿಳಾ ಅಧ್ಯಕ್ಷೆ ರತ್ಮಮ್ಮ, ಶಾಸಕರಾದ ಸಿ.ಕೆ.ರಾಮಮೂರ್ತಿ, ರಾಜ್ಯ ಬಿಜೆಪಿ ಯುವ ಮುಖಂಡ ಡಾ.ಅರುಣ್ ಸೋಮಣ್ಣ, ರವೀಂದ್ರ, ವಿಶ್ವನಾಥಗೌಡ, ಮೋಹನ್ ಕುಮಾರ್, ಬಾಬಿ ವೆಂಕಟೇಶ್, ದಾಸೇಗೌಡ, ಸಿ.ಎಂ.ರಾಜಪ್ಪ, ಕನಕಪುರ ರಾಜಣ್ಣ, ಕ್ರಾಂತಿರಾಜು ಮೊದಲಾದವರು ಹಾಜರಿದ್ದರು.




