ದಾವಣಗೆರೆ: ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಜಿಲ್ಲೆಯಲ್ಲಿನ ಪಡಿತರ ಚೀಟಿದಾರರಿಗೆ ಜುಲೈ ತಿಂಗಳಿಗೆ ಅನ್ವಯವಾಗುವಂತೆ ಪಡಿತರ ಧಾನ್ಯ ಹಂಚಿಕೆ ಮಾಡಲಾಗಿದೆ.
- ಚುನಾವಣೆಯಲ್ಲಿ ಸೋಲುವ ಭಯದಿಂದ ಸಾಂವಿಧಾನಿಕ ಸಂಸ್ಥೆಗಳ ಮೇಲೆ ಅನುಮಾನ: ಆರ್.ಅಶೋಕ
- ಗಮನ ಬೇರೆಡೆ ಸೆಳೆದು ಮತದಾರರ ಹಕ್ಕುಗಳನ್ನು ಕಸಿದುಕೊಳ್ಳುವ ಪ್ರಯತ್ನ: ಪ್ರಕಾಶ್ ರಾಜ್
- ಪ್ರಜಾಪ್ರಭುತ್ವದಲ್ಲಿ ಪ್ರಧಾನಿಯೂ ವ್ಯಂಗ್ಯಕ್ಕೆ ಅತೀತರಲ್ಲ
- ಹಾಲಿನ ದರ ಏರಿಕೆ ಕುರಿತು ಸಂಪುಟದಲ್ಲಿ ಚರ್ಚಿಸಿ ತೀರ್ಮಾನ: ಡಿ ಕೆ ಶಿವಕುಮಾರ್
- ಒಂದು ತಿಂಗಳ ಸಂಬಳವನ್ನು ಬರ ಪರಿಹಾರ ನಿಧಿಗೆ ನೀಡಿ
ಅಂತ್ಯೋದಯ ಪಡಿತರ ಚೀಟಿದಾರರಿಗೆ ಪ್ರತಿ ಕಾರ್ಡ್ಗೆ 21 ಕೆ.ಜಿ ಅಕ್ಕಿ, ರಾಗಿ ಪ್ರತಿ ಕಾರ್ಡ್ಗೆ 14 ಕೆ.ಜಿ, ಆದ್ಯತಾ ಬಿ.ಪಿ.ಎಲ್ ಪಡಿತರ ಚೀಟಿದಾರರಿಗೆ 3 ಕೆ.ಜಿ ಅಕ್ಕಿ, 2 ಕೆ.ಜಿ.ರಾಗಿ ಪ್ರತಿ ಸದಸ್ಯರಿಗೆ ಉಚಿತವಾಗಿ ವಿತರಣೆ ಮಾಡಲಾಗುತ್ತದೆ.
ಅಂತರ್ ರಾಜ್ಯ, ಅಂತರ್ ಜಿಲ್ಲೆ ಪೋರ್ಟಬಿಲಿಟಿ ಜಾರಿಯಲ್ಲಿರುವುದರಿಂದ ಯಾವುದೇ ಪಡಿತರ ವರ್ಗದ ಪಡಿತರ ಚೀಟಿಗೆ ಯಾವುದೇ ನ್ಯಾಯಬೆಲೆ ಅಂಗಡಿಯಲ್ಲಿ ಉಚಿತವಾಗಿ ಪಡೆಯಲು ಅವಕಾಶ ಕಲ್ಪಿಸಲಾಗಿದೆ ಎಂದು ದಾವಣಗೆರೆ ತಹಶೀಲ್ದಾರ್ ಡಾ.ಅಶ್ವಥ್ ತಿಳಿಸಿದ್ದಾರೆ.




