ಸೇವಾದಳದಿಂದ ಕೇಂದ್ರ ಬಿಜೆಪಿ ಸರ್ಕಾರ ಬಜೆಟ್ ನಲ್ಲಿ ಅನ್ಯಾಯ ಆರೋಪ
ಬೆಂಗಳೂರು: ಕೆಪಿಸಿಸಿ ಕೇಂದ್ರ ಕಛೇರಿ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸೇವಾದಳದ ವತಿಯಿಂದ ಕೇಂದ್ರ ಸರ್ಕಾರದ ಬಜೆಟ್ ನಲ್ಲಿ ಕರ್ನಾಟಕಕ್ಕೆ ಆಗಿರುವ ಅನ್ಯಾಯದ ವಿರುದ್ದ ಚೊಂಬು ಪ್ರದರ್ಶನದ ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದರು.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ವಿಧಾನಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ, ಮಾಜಿ ಸಚೇತಕ ನಾರಾಯಣಸ್ವಾಮಿ, ಸೇವಾದಳ ರಾಜ್ಯ ಸಂಘಟಕ ಎಂ.ರಾಮಚಂದ್ರ ನೇತೃತ್ವದಲ್ಲಿ ಸೇವಾದಳ ಮಹಿಳಾ ರಾಜ್ಯ ಸಂಘಟಕರು ಗಿರಿಜಾ ಹೂಗಾರ್, ಸೇವಾದಳದ ರಾಜ್ಯ ಪದಾಧಿಕಾರಿಗಳು, ಜಿಲ್ಲಾ ಪದಾಧಿಕಾರಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಮಂಜುನಾಥ್ ಭಂಡಾರಿ ಮಾತನಾಡಿ, ಬಿಜೆಪಿ ಕೇಂದ್ರ ಸರ್ಕಾರದ ಮಲತಾಯಿ ಧೋರಣೆ ಖಂಡಿಸಿ ಜಿಲ್ಲಾ ಮಟ್ಚ ಮತ್ತು ತಾಲೂಕು ಮಟ್ಟದಲ್ಲಿ ರಾಜ್ಯಾದ್ಯಂತ ಪ್ರತಿಭಟನೆ ಮಾಡಲಾಗುತ್ತಿದೆ. ಮಹಾರಾಷ್ಟ್ರ ರಾಜ್ಯ ನಂತರ ಕರ್ನಾಟಕ ರಾಜ್ಯ ಅತಿ ಹೆಚ್ಚು ತೆರಿಗೆ ನೀಡುವ ರಾಜ್ಯವಾಗಿದೆ. ರಾಜ್ಯದಿಂದ ಪ್ರತಿನಿಧಿಸುವ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ರವರು ರಾಜ್ಯಕ್ಕೆ ಅನ್ಯಾಯ ಮಾಡಿದ್ದಾರೆ. ಬಿಜೆಪಿ ಕೇಂದ್ರ ಸರ್ಕಾರ ಕಳೆದ 11 ವರ್ಷಗಳಿಂದ ರಾಜ್ಯಕ್ಕೆ ಬರ ಪರಿಹಾರ, ಪ್ರವಾಹ ಮತ್ತು ನೂತನ ಯೋಜನೆ ಎಲ್ಲದರಲ್ಲು ಕೇಂದ್ರ ಸರ್ಕಾರ ಅನ್ಯಾಯ ಮಾಡಿದೆ ಎಂದರು.
ಎಂ.ರಾಮಚಂದ್ರ ಮಾತನಾಡಿ, ಕೆಪಿಸಿಸಿ ಅಧ್ಯಕ್ಷರು, ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ರವರು ಮತ್ತು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯರವರ ಮಾರ್ಗದರ್ಶನದಲ್ಲಿ ಕೇಂದ್ರ ಬಿಜೆಪಿ ಸರ್ಕಾರದದ ಮಲತಾಯಿ ಧೋರಣೆಯನ್ನು ಖಂಡಿಸಿ ಚೊಂಬು ಪ್ರತಿಭಟನೆ ಮಾಡಲಾಗುತ್ತಿದೆ ಎಂದರು.
ರಾಜ್ಯದಿಂದ ಪ್ರತಿವರ್ಷ ಜಿ.ಎಸ್.ಟಿ.ತೆರಿಗೆ ರೂಪದಲ್ಲಿ ಲಕ್ಷಾಂತರ ಕೋಟಿ ರೂಪಾಯಿ ಸಂದಾಯವಾಗುತ್ತದೆ ರಾಜ್ಯಕ್ಕೆ ನ್ಯಾಯಯುವಾಗಿ ನೀಡಬೇಕಾದ ಅನುದಾನದಲ್ಲಿ ತಾರತಮ್ಯ ಮಾಡುತ್ತಿದ್ದಾರೆ. ಕಳೆದ 11ವರ್ಷಗಳಿಂದ ಕೇಂದ್ರ ಬಿಜೆಪಿ ಸರ್ಕಾರ ಬಜೆಟ್ ನಲ್ಲಿ ರಾಜ್ಯಕ್ಕೆ ಬಾರಿ ಅನ್ಯಾಯವಾಗಿದೆ. 5 ಕೇಂದ್ರ ಸಚಿವರು ಮತ್ತು 17ಸಂಸದರು ಮೌನವಾಗಿದ್ದಾರೆ, ಆಂಧ್ರ ಮತ್ತು ಬಿಹಾರ ರಾಜ್ಯಕ್ಕೆ ಅನುದಾನ ಹೆಚ್ಚಿಗೆ ನೀಡಿದ್ದಾರೆ ಒಂದು ಕಣ್ಣಿಗೆ ಸುಣ್ಣ , ಇನ್ನೊಂದು ಕಣ್ಣಿಗೆ ಬೆಣ್ಣೆ ಎಂಬ ನೀತಿ ಕೇಂದ್ರ ಸರ್ಕಾರ ಅನುಸರಿಸುತ್ತಿದೆ ಎಂದರು.




