ನೆರೆ ಹಾವಳಿ ಪರಿಶೀಲನೆಗೆ ಬಿಜೆಪಿಯಿಂದ ತಂಡಗಳ ರಚನೆ

2 years ago

ಬೆಂಗಳೂರು: ಬೆಳಗಾವಿ, ವಿಜಯಪುರ, ಬಾಗಲಕೋಟೆ ಸೇರಿದಂತೆ ರಾಜ್ಯದ ಕರಾವಳಿ ಹಾಗೂ ಇತರೆ ಭಾಗದಲ್ಲಿ ಭಾರಿ ಮಳೆಯಿಂದ ಉಂಟಾಗಿರುವ ನೆರೆ ಹಾವಳಿಯನ್ನು ಪರಿಶೀಲಿಸಿ ಸ್ಪಂದಿಸುವ ನಿಟ್ಟಿನಲ್ಲಿ ಪ್ರತಿಪಕ್ಷ ಬಿಜೆಪಿ ನಾಯಕರ ತಂಡ ರಚಿಸಿದೆ.

ಅತಿವೃಷ್ಟಿ ಪೀಡಿತ ಉತ್ತರಕರ್ನಾಟಕ ಹಾಗೂ ಮಲೆನಾಡು ಭಾಗದಲ್ಲಿ ಉಂಟಾಗಿರುವ ಬೆಳೆ ಹಾನಿ ಹಾಗೂ ಆಸ್ತಿಪಾಸ್ತಿ ಹಾನಿಯ ಬಗ್ಗೆ ಅಧ್ಯಯನ ನಡೆಸಿ ಜನತೆಯ ಸಂಕಷ್ಟಕ್ಕೆ ಈ ತಂಡ  ಸ್ಪಂದಿಸಲಿದೆ.

ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್, ನೇತೃತ್ವದ ತಂಡದಲ್ಲಿ ಮಾಜಿ ಸಚಿವರಾದ ಅಶ್ವಥನಾರಾಯಣ, ಆರಗ ಜ್ಞಾನೇಂದ್ರ, ಬಿ.ಶ್ರೀರಾಮುಲು ಹಾಗೂ ಮಾಜಿ ಸಚಿವೆ ಶಶಿಕಲಾ ಜೊಲ್ಲೆ  ಇರಲಿದ್ದಾರೆ.

ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ ನೇತೃತ್ವದಲ್ಲಿ ಮತ್ತೊಂದು ತಂಡ ರಚನೆಯಾಗಿದೆ. ಇದಲ್ಲದೆ ಅರವಿಂದ ಬೆಲ್ಲದ್ ನೇತೃತ್ವದಲ್ಲಿ ಮತ್ತೊಂದು ತಂಡ ಮಳೆಹಾನಿಗೊಳಗಾದ ಪ್ರದೇಶದಲ್ಲಿ ಸಂಚರಿಸಲಿದೆ.

Leave a Reply