ಬೆಂಗಳೂರು: ರಾಜ್ಯ ಸರ್ಕಾರದ ಯಾವುದೇ ಗೊಡ್ಡು ಬೆದರಿಕೆಗಳಿಗೆ ಸೊಪ್ಪು ಹಾಕದೆ ಉದ್ದೇಶಿತ ಪಾದಯಾತ್ರೆಯನ್ನು ಮಾಡುತ್ತೇವೆ. ರಾಜ್ಯ ಸರ್ಕಾರದ ಅಕ್ರಮಗಳ ಬಗ್ಗೆ ಜನರಿಗೆ ಮಾನವರಿಕೆ ಮಾಡಿಕೊಡುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದ್ದಾರೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಪಾದಯಾತ್ರೆ ಕುರಿತು ಉಭಯ ಪಕ್ಷಗಳ ನಾಯಕರೊಂದಿಗೆ ಪೂರ್ವಭಾವಿ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮದ ಮೂಲಕ ಪರಿಶಿಷ್ಟ ವರ್ಗಕ್ಕೆ ಸೇರಿದ ಹಣವನ್ನು ಮುಖ್ಯಮಂತ್ರಿ ಮತ್ತು ಅವರ ಸಂಪುಟ ಸದಸ್ಯರು ಕಬಳಿಸಿದ್ದಾರೆ ಎಂದರು.
ಪರಿಶಿಷ್ಟ ಜಾತಿ ಮತ್ತು ವರ್ಗಗಳಿಗೆ ಮೀಸಲಿಟ್ಟ ಹಣವನ್ನು ನಿಯಮ ಬಹಿರವಾಗಿ ಅನ್ಯ ಕಾರ್ಯಕ್ಕೆ ಬಳಸುವ ಮೂಲಕ ಈ ಸಮುದಾಯಕ್ಕೆ ಅನ್ಯಾಯ ಮಾಡಿರುವ ರಾಜ್ಯ ಸರ್ಕಾರವನ್ನು ಕಿತ್ತೊಗೆಯುವ ದೃಷ್ಟಿಯಿಂದ ಈ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದರು.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಕರ್ಮಕಾಂಡದಲ್ಲಿ ಸುಮಾರು ನಾಲ್ಕು ಸಾವಿರ ಕೋಟಿಯಷ್ಟು ಅಕ್ರಮ ನಡೆದಿದೆ. ಇದರಲ್ಲಿ ಮುಖ್ಯಮಂತ್ರಿ ಮತ್ತು ಅವರ ಕುಟುಂಬ ಸದಸ್ಯರೇ ನೇರವಾಗಿ ಶಾಮಿಲಾಗಿದ್ದಾರೆ ಎಂದರು.
ಅಕ್ರಮ ಬಗ್ಗೆ ಸರಕಾರ ರಚಿಸಿದ ಎಸ್ಐಟಿ ಎಂದರೆ ಅದು ಸಿದ್ದರಾಮಯ್ಯ ಇನ್ವೆಸ್ಟಿಗೇಶನ್ ಅಷ್ಟೇ. ಅಹಿಂದ ಸಮುದಾಯಕ್ಕೆ ವಂಚಿಸುವ ಕೆಲಸವನ್ನು ಮುಖ್ಯಮಂತ್ರಿಗಳು ಮಾಡುತ್ತಿದ್ದಾರೆ ಎಂದರು.
ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್ ಮಾತನಾಡಿ, ಸಿದ್ದರಾಮಯ್ಯನವರ ಬಾವಮೈದುನರು 3.16 ಎಕರೆ ಜಮೀನನ್ನು ಅತಿ ಕಡಿಮೆ ಬೆಲೆಗೆ ಪಡೆದಿದ್ದಾರೆ. ಇದೇನಾ ನಿಮ್ಮ ಜನಪರತೆ ಎಂದರು.
ವಿಧಾನ ಪರಿಷತ್ತಿನ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮಾತನಾಡಿ, ವಾಲ್ಮೀಕಿ ನಿಗಮದ ಹಣ ಅವ್ಯವಹಾರದಿಂದ ಪರಿಶಿಷ್ಟ ಸಮುದಾಯಗಳಿಗೆ ಅನ್ಯಾಯವಾಗಿದೆ ಎಂದರು.




