ರಾಜ್ಯಪಾಲರನ್ನು ಬಳಸಿಕೊಂಡು ರಾಜ್ಯ ಸರ್ಕಾರ ಅಸ್ಥಿರಗೊಳಿಸುವ ಕೆಲಸ: ಕೃಷ್ಣ ಬೈರೇಗೌಡ

2 years ago

ಬಾಗಲಕೋಟೆ: ಕೇಂದ್ರವು ರಾಜ್ಯಕ್ಕೆ ಮಾಡುತ್ತಿರುವ ಅನ್ಯಾಯ ಖಂಡಿಸಿ ಹೋರಾಟ ಮಾಡುತ್ತಿರುವ ಹಿನ್ನಲೆಯಲ್ಲಿ ರಾಜ್ಯಪಾಲರನ್ನು ಬಳಸಿಕೊಂಡು ರಾಜ್ಯ ಸರ್ಕಾರ ಅಸ್ಥಿರಗೊಳಿಸುವ ಕೆಲಸ ಮಾಡಲಾಗುತ್ತಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಆರೋಪಿಸಿದರು.

ರಾಜ್ಯದ ನೆರೆ ಪೀಡಿತ ಪ್ರದೇಶಗಳ ಭೇಟಿ ಸಮಯದಲ್ಲಿ ಸುದ್ದಿಗಾರರು ಸಿದ್ದರಾಮಯ್ಯ ಸರ್ಕಾರದ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ರಾಜ್ಯದ ಜನರ ಆಶೀರ್ವಾದ ಹಾಗೂ ಸಂವಿಧಾನದ ರಕ್ಷಣೆ ಇರುವುದರಿಂದ ಏನು ಆಗುವುದಿಲ್ಲ ಎಂದರು.

ವಾಮಮಾರ್ಗದ ಮೂಲಕ ಸರ್ಕಾರ ಉರುಳಿಸಲು ಸಾಧ್ಯವಾಗುವುದಿಲ್ಲ. ಕಾನೂನು, ಜನರ ನಡುವೆ ಹೋಗಿ ಕೇಂದ್ರದ ವಿರುದ್ಧ ಹೋರಾಟ ಮುಂದುವರಿಸಲಿದ್ದೇವೆ ಎಂದರು.

ರಾಜ್ಯದಲ್ಲಿ ಜನ ವಿಧಾನಸಭೆ, ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿಸಿರುವುದರಿಂದ ಕ್ಷೇತ್ರಗಳ ಪುನರ್ ವಿಂಗಡಣೆ ಮೂಲಕ ಸಂಸದರ ಸ್ಥಾನಗಳನ್ನು ಕಡಿಮೆ ಮಾಡಲು ಬಿಜೆಪಿ ಮುಂದಾಗಿದೆ ಎಂದು ಆರೋಪಿಸಿದರು.

Leave a Reply