ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ಪಾದಯಾತ್ರೆಗೆ ಸಜ್ಜಾಗುತ್ತಿರುವ ಬಿಜೆಪಿಯಲ್ಲಿ ಇದೀಗ ಭಿನ್ನಮತದ ಧಗೆ ಆವರಿಸಿರುವ ಬೆನ್ನಲ್ಲೇ ತಮ್ಮ ಪಕ್ಷ ಒಡೆದ ಮನೆಯಾಗಿದೆ ಎಂದು ಹಿರಿಯ ನಾಯಕ ಹಿರಿಯ ನಾಯಕ ಡಿ.ವಿ.ಸದಾನಂದ ಗೌಡ ಹೇಳಿಕೆ ನೀಡಿದ್ದಾರೆ.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾಮಾನ್ಯ ವಾಗಿ ಆಡಳಿತ ಪಕ್ಷದಲ್ಲಿ ಒಡಕು ಸಹಜ. ಆದರೆ ದುರದೃಷ್ಟವಶಾತ್ ಪ್ರತಿ ಪಕ್ಷದಲ್ಲಿ ಒಡಕು ಹೆಚ್ಚಾಗಿದೆ. ಬಿಜೆಪಿಯಲ್ಲಿ ವಿಜಯೇಂದ್ರ, ಅಶೋಕ್, ಜಾರಕಿಹೊಳಿ, ಯತ್ನಾಳ್, ಮೊದಲಾದ ಬಣಗಳು ಉಂಟಾಗಿವೆ. ಇದು ಪಕ್ಷ ಸಂಘಟನೆ ಮೇಲೆ ಕೆಟ್ಟ ಪರಿಣಾಮ ಬೀರುತ್ತಿದೆ ಎಂದರು.
ರಾಜ್ಯದಲ್ಲಿ ಆಡಳಿತ ಪಕ್ಷದಲ್ಲೇ ಹಲವಾರು ಗೊಂದಲಗಳು ಇವೆ. ಜನಸಾಮಾನ್ಯರಿಗೆ ನೀಡಬೇಕಾದ ನಿವೇಶನಗಳನ್ನು ಮುಖ್ಯಮಂತ್ರಿ ನಿಯಮ ಬಾಹಿರವಾಗಿ ತಮ್ಮ ಪತ್ನಿಯ ಹೆಸರಿಗೆ ಮಾಡಿಸಿಕೊಳ್ಳುತ್ತಿದ್ದಾರೆ. ಇಂತಹವರ ವಿರುದ್ಧ ಹೋರಾಟ ನಡೆಸಬೇಕಾದ ಪ್ರತಿಪಕ್ಷದಲ್ಲಿ ಗೊಂದಲ ಉಂಟಾಗಿರುವ ಬಗ್ಗೆ ಕಾರ್ಯಕರ್ತರು ಅತೀವ ಬೇಸರ ವ್ಯಕ್ತಪಡಿಸುತ್ತಿದ್ದಾರೆ ಎಂದರು.
ರಾಜ್ಯದಲ್ಲಿ ಎನ್ ಡಿ ಎ ಮಿತ್ರಕೂಟಕ್ಕೆ ಉತ್ತಮ ಅವಕಾಶವಿದೆ. ಅದನ್ನು ಸದುಪಯೋಗ ಪಡಿಸಿಕೊಳ್ಳಬೇಕು. ಜೆಡಿಎಸ್ ಜೊತೆಗೆ ಬಾಂಧವ್ಯ ಇನ್ನಷ್ಟು ಗಟ್ಟಿಯಾಗಬೇಕು. ನಿರ್ಧಾರಗಳನ್ನು ಕೈಗೊಳ್ಳುವಾಗ ಬಿಜೆಪಿ ನಾಯಕರು ಜೆಡಿಎಸ್ ಅನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು ಎಂದರು.




