ಬೆಂಗಳೂರು: ಉತ್ತರ ಕನ್ನಡ, ಬೆಳಗಾವಿ, ಶಿವಮೊಗ್ಗ ಸೇರಿದಂತೆ ರಾಜ್ಯದ 10 ಜಿಲ್ಲೆಗಳಲ್ಲಿ ಆವರಿಸಿರುವ ಪಶ್ಚಿಮಘಟ್ಟ ಪ್ರದೇಶದಲ್ಲಿ ಅಕ್ರಮವಾಗಿ ತಲೆ ಎತ್ತಿರುವ ಅಕ್ರಮ ರೆಸಾರ್ಟ್, ಹೋಂ ಸ್ಟೇ ಮತ್ತು ಎಲ್ಲ ಅರಣ್ಯ ಒತ್ತುವರಿಗಳನ್ನು ತೆರವು ಮಾಡಲು ಪಶ್ಚಿಮಘಟ್ಟ ಅರಣ್ಯ ಒತ್ತುವರಿ ತೆರವು ಕಾರ್ಯಪಡೆ ರಚಿಸಿರುವುದಾಗಿ ಅರಣ್ಯ ಸಚಿವ ಈಶ್ವರ ಖಂಡ್ರೆ ಘೋಷಿಸಿದ್ದಾರೆ.
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್
- ನಮ್ಮ ಪ್ರತಿಭೆಗಳು ದೆಹಲಿಯಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿರುವುದು ಸಂತಸದ ವಿಷಯ: ಕೆ.ಸುಧಾಕರ್
ವಯನಾಡು ಮತ್ತು ಉತ್ತರ ಕನ್ನಡದ ಶಿರೂರಿನಲ್ಲಿ ಘೋರ ದುರಂತ ಸಂಭವಿಸಿದ್ದು ಜೀವಹಾನಿ ಆಗಿದೆ. ಸಹಸ್ರಾರು ವರ್ಷಗಳ ಗುಡ್ಡವೇ ಕಣ್ಮರೆಯಾಗಿದೆ. ಶಿರಾಡಿ ಘಾಟ್, ಚಾರ್ಮಾಡಿ ಘಾಟ್ ಸೇರಿದಂತೆ ರಾಜ್ಯದ ಪಶ್ಚಿಮಘಟ್ಟಗಳಲ್ಲಿ ನಿರಂತರವಾಗಿ ಗುಡ್ಡ ಕುಸಿತಗಳು ಸಂಭವಿಸುತ್ತಿವೆ. ಈಗಲೂ ನಾವು ಎಚ್ಚೆತ್ತುಕೊಳ್ಳದಿದ್ದರೆ ಮುಂದಿನ ಪೀಳಿಗೆ ನಮನ್ನು ಕ್ಷಮಿಸುವುದಿಲ್ಲ. ಹೀಗಾಗಿ ಇಂತಹ ಕಾರ್ಯಪಡೆ ಅಗತ್ಯ ಎಂದು ಹೇಳಿದ್ದಾರೆ.
ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಅರಣ್ಯ ಕಾರ್ಯಪಡೆ ಮುಖ್ಯಸ್ಥರ ನೇತೃತ್ವದಲ್ಲಿ ಈ ಕಾರ್ಯಪಡೆ ರಚಿಸಲಾಗಿದ್ದು, ನಾಳೆಯಿಂದಲೇ ಪಶ್ಚಿಘಟ್ಟದಲ್ಲಿನ ಅರಣ್ಯ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಲಿದೆ ಎಂದಿದ್ದಾರೆ.
ಪಶ್ಚಿಮಘಟ್ಟದಲ್ಲಿನ ಅರಣ್ಯದಲ್ಲಿ 2015ರ ನಂತರ ಆಗಿರುವ ಒತ್ತುವರಿಗೆ ಸಂಬಂಧಿಸಿದಂತೆ 64ಎ ಪ್ರಕ್ರಿಯೆ ಪೂರ್ಣಗೊಂಡಿರುವ ಎಲ್ಲ ಪ್ರಕರಣಗಳಲ್ಲಿ ತೆರವು ಕಾರ್ಯಾಚರಣೆ ಮಾಡಲು ಸ್ಪಷ್ಟ ಸೂಚನೆ ನೀಡಲಾಗಿದೆ ಎಂದಿದ್ದಾರೆ.
ಎಸಿಎಫ್, ಡಿಸಿಎಫ್, ಸಿಎಫ್, ಸಿಸಿಎಫ್, ಎ.ಪಿ.ಸಿಸಿಎಫ್ ಗಳಿಗೂ ಅರಣ್ಯ ಒತ್ತುವರಿ ಪ್ರಕರಣಗಳ ವಿಚಾರಣೆ ನಡೆಸಿ 64ಎ ಅಡಿಯಲ್ಲಿ ಆದೇಶ ನೀಡಲು ಅವಕಾಶವಿದ್ದು, ಬಾಕಿ ಇರುವ ಎಲ್ಲ 64 ಎ ಪ್ರಕರಣಗಳನ್ನು ಶೀಘ್ರ ಇತ್ಯರ್ಥಗೊಳಿಸಲು ಎಸಿಎಫ್ ಮೇಲ್ಪಟ್ಟ ದರ್ಜೆಯ ಎಲ್ಲ ಅಧಿಕಾರಿಗಳಿಗೂ ವಾರದಲ್ಲಿ ಎರಡು ದಿನ ತಮ ತಮ ವಲಯದಲ್ಲಿ ಪ್ರಕ್ರಿಯೆ ನಡೆಸಿ ತ್ವರಿತವಾಗಿ ಆದೇಶ ನೀಡಲು ಸೂಚಿಸಿದ್ದಾರೆ.
ಈಗಾಗಲೇ ನ್ಯಾಯಾಲಯದಲ್ಲಿರುವ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲು ಅಡ್ವೊಕೇಟ್ ಜನರಲ್ ಅವರೊಂದಿಗೆ ಸಮಾಲೋಚಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಪಶ್ಚಿಮಘಟ್ಟ ಅರಣ್ಯ ಒತ್ತುವರಿ ಕಾರ್ಯಪಡೆಗೆ ಸೂಚಿಸಿರುವುದಾಗಿ ಹೇಳಿದ್ದಾರೆ.
ಮೊದಲಿಗೆ ದೊಡ್ಡ ಪ್ರಮಾಣದಲ್ಲಿ ಅರಣ್ಯ ಒತ್ತುವರಿ ಮಾಡಿ ನಿರ್ಮಿಸಲಾಗಿರುವ ಅಕ್ರಮ ರೆಸಾರ್ಟ್, ಹೋಂಸ್ಟೇಗಳನ್ನು ತೆರವು ಮಾಡಿ, ಬಳಿಕ ತೋಟ, ಕಟ್ಟಡಗಳನ್ನು ತೆರವು ಮಾಡಲು ಸೂಚಿಸಲಾಗಿದೆ. ಎಲ್ಲರೂ ಕಾನೂನಿನ ಮುಂದೆ ಸಮಾನರು. ಪಶ್ಚಿಮ ಘಟ್ಟವನ್ನು ಒತ್ತುವರಿ ಮಾಡಿ ವಾಣಿಜ್ಯ ಚಟುವಟಿಕೆ ನಡೆಸುವವರಿಗೆ ಅವಕಾಶ ನೀಡುವುದಿಲ್ಲ. ಇಂಥ ಚಟುವಟಿಕೆಯಿಂದ ಪರಿಸರಕ್ಕೆ ಆಗುವ ಹಾನಿಯನ್ನು ಸರಿದೂಗಿಸಲು ಸಾಧ್ಯವಿಲ್ಲ ಎಂದಿದ್ದಾರೆ.




